ಪುನೀತ್ ಜೀವನ ಎಲ್ಲಿರಿಗೂ ಪ್ರೇರಣೆ: ಡಾ.ಪ್ರಭಾ ಮಲ್ಲಿಕಾರ್ಜುನ್
ದಾವಣಗೆರೆ: ನಗರದ ಚಾಮುಂಡೇಶ್ವರಿ ಚಿತ್ರಮಂದಿರದ ಬಳಿ ಡಾ. ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬಕ್ಕೆ ಚಾಲನೆ ನೀಡಿ, ಡಾ. ಪುನಿತ್ ರಾಜ್ ಕುಮಾರ್ ಅವರ ಜೀವನ ಹಾಗೂ ಆದರ್ಶ ಗಳು ಎಲ್ಲರಿಗೂ ಪ್ರೇರಣೆಯಾಗಲಿ ಎಂದು ಆಶಿಸಿದರು.
ಡಾ. ಶಿವರಾಜಕುಮಾರ್ ಅಭಿಮಾನಿಗಳ ಸಂಘದಿಂದ ಜಿಲ್ಲಾಧ್ಯಕ್ಷ ಯೋಗೇಶ್, ರಕ್ತದಾನ ಮಾಡುವುದರ ಮುಖಾಂತರ ರಕ್ತದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮಹಾನಗರ ಪಾಲಿಕೆ ಸದಸ್ಯೆ ಸವಿತಾ ಹುಲ್ಲುಮನೆ ಗಣೇಶ್, ಸಂಘದ ಮಹಿಳಾ ಜಿಲ್ಲಾ ಅಧ್ಯಕ್ಷೆ ಭಾಗ್ಯದೇವಿ, ಹರಣಿ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಅಖಿಲ ಕರ್ನಾಟಕ ಡಾ.ರಾಜ್ ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟ, ಡಾ.ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ ಹಾಗೂ ರಾಜರತ್ನ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘ ಜಿಲ್ಲಾ ಘಟಕದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.