ಪುನೀತ್‌ಗೆ ‘ಕರ್ನಾಟಕ ರತ್ನ’- ಶೀಘ್ರದಲ್ಲಿಯೇ ದಿನಾಂಕ ನಿಗದಿ
ಬೆಂಗಳೂರು: ನಟ ದಿವಂಗತ ಪುನೀತ್ ರಾಜ್‌ಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಕೊಡುವ ಸಂಬAಧ ಆದಷ್ಟು ಬೇಗ ಕಾರ್ಯಕ್ರಮದ ದಿನಾಂಕ ನಿಗದಿ ಮಾಡಲಾಗುವುದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪುನೀತ್ ರಾಜ್‌ಕುಮಾರ್ 47ನೇ ವರ್ಷದ ಹುಟ್ಟು ಹಬ್ಬಕ್ಕೆ ಶುಭಾಶಯಗಳನ್ನು ತಿಳಿಸಿರುವ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದಾರೆ. ಪುನೀತ್ ಅವರಿಗೆ ಕರ್ನಾಟಕ ರತ್ನ ಕೊಡಲು ಈಗಾಗಲೇ ತೀರ್ಮಾನ ಮಾಡಲಾಗಿದೆ. ಆದಷ್ಟು ಬೇಗ ಅವರ ಕುಟುಂಬದವರೊಂದಿಗೆ ಮಾತನಾಡಿ ಕಾರ್ಯಕ್ರಮದ ದಿನಾಂಕ ನಿಗದಿ ಮಾಡಲಾಗುವುದು. ಪುನೀತ್ ಅವರಿಗೆ ಮತ್ತು ರಾಜ್‌ಕುಮಾರ್ ಅವರಿಗೆ ಗೌರವ ಕೊಡಲು ಯಾವ ರೀತಿಯ ಕಾರ್ಯಕ್ರಮ ಆಯೋಜಿಸಬೇಕು ಎಂಬುದರ ಕುರಿತು ಸಮಿತಿಯೊಂದನ್ನು ರಚಿಸಲಾಗುವುದು. ಆ ಮೂಲಕ ಎಲ್ಲರೂ ಚರ್ಚಿಸಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಹೇಳಿದರು. ನಮ್ಮೆಲ್ಲರ ಅಚ್ಚುಮೆಚ್ಚಿನ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬ ಇದೆ. ಅವರು ಇದ್ದಿದ್ದರೆ ಸಂಭ್ರಮದಿಂದ ಆಚರಿಸುತ್ತಿದ್ದೆವು. ಆದರೆ, ಅವರನ್ನು ಕಳೆದುಕೊಂಡು ದುಃಖದಲ್ಲಿದ್ದೇವೆ. ಅವರ ಆದರ್ಶದ ಬದುಕು, ಸಾರ್ವಜನಿಕವಾಗಿ ನಡೆದುಕೊಂಡ ರೀತಿ, ಬಡವರಿಗೆ ಸಹಾಯ, ದಾನ ಮಾಡಿದ ರೀತಿ ಎಲ್ಲರಿಗೂ ಪ್ರೇರಣೆ. ಚಿಕ್ಕ ವಯಸ್ಸಿಗೆ ಆದರ್ಶ ಪ್ರಾಯರಾಗಿ ಬದುಕಿದರು’ ಎಂದು ಹೇಳಿದರು.