application; ಆಟೋ ಚಾಲಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ

ದಾವಣಗೆರೆ, ಅ.24: ಜಿ ಬಿ ವಿನಯ್ ಕುಮಾರ್ ಅಭಿಮಾನಿ ಬಳಗದಿಂದ ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.70ಕ್ಕೂ ಹೆಚ್ಚು ಅಂಕ ಪಡೆದ ನಗರದ ಆಟೋ ಮತ್ತು ಗೂಡ್ಸ್ ಚಾಲಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಹೆಸರು ನೋಂದಾಯಿಸಲು ಅರ್ಜಿ (Application) ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ತಮ್ಮ ಅಂಕ ಪಟ್ಟಿ, ಆಧಾರ್ ಕಾರ್ಡ್ , ಆಟೋ ಡ್ರೈವರ್ ತಮ್ಮ ಡಿ.ಎಲ್ ಜೆರಾಕ್ಸ್ ಪ್ರತಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಅ.30 ರೊಳಗಾಗಿ ಎಸ್ ಎಸ್ ಲೇ ಔಟ್ ನ 10ನೇ ಕ್ರಾಸ್ ನಲ್ಲಿರುವ ಕಚೇರಿಯಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ:7676680136, 9353452348 ಸಂಪರ್ಕಿಸಬಹುದು.