ಪುತ್ತೂರು : 15 ದಿನಗಳ ಹಿಂದೆ ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
ಪುತ್ತೂರು : 15 ದಿನಗಳ ಹಿಂದೆ ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಮೃತ ವಿದ್ಯಾರ್ಥಿನಿ ಐವರ್ನಾಡು ಸಮೀಪದ ಪಾಂಬಾರು ಸೋಮಸುಂದರ ಎಂಬುವವರ ಪುತ್ರಿ ಆರತಿ ಎಂದು ಗುರುತಿಸಲಾಗಿದೆ.
ಆರತಿ 15 ದಿನಗಳ ಹಿಂದೆ ವಿಷ ಸೇವಿಸಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ., ಅಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಅಲ್ಲದೇ ವೈದ್ಯರ ಸಲಹೆ ಮೇರೆಗೆ ಸುಳ್ಯಕ್ಕೆ ತಂದು ಚಿಕಿತ್ಸೆ ಕೊಡಲಾಗುತ್ತಿತ್ತು ಆದರೇ ಚಿಕಿತ್ಸೆ ಫಲಕಾರಿಯಾಗದೇ ಅವರು ನಿನ್ನೆ ಮೃತಪಟ್ಟಿದ್ದಾರೆ. ಆರತಿಯು ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಮೃತ ವಿದ್ಯಾರ್ಥಿನಿ ತಂದೆ, ತಾಯಿ ಮತ್ತು ಓರ್ವ ಸಹೋದರರನ್ನು ಅಗಲಿದ್ದಾರೆ.