ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉತ್ತಮ ನಾಗರಿಕರನ್ನಾಗಿಸಿ-ನ್ಯಾ. ರಾಜೇಶ್ವರಿ ಹೆಗಡೆ

ದಾವಣಗೆರೆ:ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರು ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ಅವಕಾಶ ಮಾಡಿಕೊಡಬೇಕು. ಯಾವ ಮಗುವು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ ಎನ್ ಹೆಗಡೆ ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಅಭಿಯೋಜನೆ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಪ್ಯಾನ್ ಇಂಡಿಯಾ ಅವೆರ್‌ನೆಸ್ ಅಂಡ್ ಔಟ್‌ರೀಚ್ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಪಲಾನುಭವಿಗಳಿಗೆ ಸರ್ಕಾರಿ ಸೌಲಭ್ಯಗಳು ಹಾಗೂ ಕಲ್ಯಾಣ ಯೋಜನೆಗಳ ವಿತರಣೆಯ ಬೃಹತ್ ಮೇಳ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾತಂತ್ರö್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆಯಲ್ಲಿ ಈಗಾಗಲೇ ಹಲವರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮನೆಮನೆಗೆ ತೆರಳಿ ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸುತ್ತಿದ್ದೇವೆ. ವಿದ್ಯಾರ್ಥಿಗಳು ಜೀವನವನ್ನು ಉಜ್ವಲವಾಗಿ ರೂಪಿಸಿಕೊಳ್ಳಲು ಕಾಯ್ದೆ, ಕಾನೂನುಗಳ ಅರಿವು ಅತ್ಯಗತ್ಯ. ರಾಷ್ಟಿçÃಯ ಸೇವಾ ಪ್ರಾಧಿಕಾರದಿಂದ ಹಮ್ಮಿಕೊಳ್ಳುವ ಎಲ್ಲಾ ಕಾರ್ಯಕ್ರಮಗಳ ಪ್ರಯೋಜನವನ್ನು ಸಾರ್ವಜನಿಕರು ಸದುಪಯೋಗಪಡೆದುಕೊಂಡು ಜಿಲ್ಲೆಯನ್ನು ಸಾಕ್ಷರತ ಜಿಲ್ಲೆಯನ್ನಾಗಿ ಮಾಡುವಲ್ಲಿ ಸಹಕಾರ ನೀಡಬೇಕು ಎಂದು ತಿಳಿಸಿದರು.

ಸರ್ಕಾರಿ ಅಭಿಯೋಜಕರಾದ ಎಸ್.ವಿ.ಪಾಟೀಲ್ ಮಾತನಾಡಿ, ನಮ್ಮ ಜೀವನಕ್ಕಿಂತ ಹೆಚ್ಚು ವಿಸ್ತಾರವಾದುದೆಂದರೆ ಕಾನೂನು. ತಾಯಿ ಗರ್ಭದಿಂದ ಹಿಡಿದು ಸಾವನ್ನಪ್ಪಿದ ಬಳಿಕವೂ ಕಾನೂನುಗಳ ಅವಶ್ಯಕತೆ ಇದ್ದು, ಕಾನೂನು-ಕಾಯ್ದೆಗಳ ಬಗ್ಗೆ ಅಸಡ್ಡೆ ತೋರಬಾರದು. ಕಾನೂನಿನ ಅರಿವು ಇರುವವರು ಶೋಷಣೆಯಿಂದ ತಪ್ಪಿಸಿಕೊಳ್ಳುತ್ತಾರೆ. ಕಾನೂನು ತಿಳಿಯದವರು ಸದಾ ಶೋಷಣೆಗೆ ಒಳಪಡುತ್ತಾರೆ ಎಂದರು.

1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜೆ.ವಿ.ವಿಜಯಾನಂದ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಶಿಕ್ಷಣ ಪಡೆದರೂ ಸಹ ಕಾನೂನಿನ ತಿಳುವಳಿಕೆಯಿಲ್ಲದೇ ಹೆಚ್ಚು ಶೋಷಣೆಗೆ ಒಳಪಡುತ್ತಿದ್ದಾರೆ. ಕಾನೂನಿನ ತೊಡಕುಗಳಿಂದ ಹಲವರು ವಂಚಿತರಾಗುತ್ತಿದ್ದಾರೆ. ಶಾಲಾ ಪಠ್ಯ ಪುಸ್ತಕಗಳಲ್ಲಿ ಕಾನೂನಿನ ಕುರಿತು ಕೆಲ ವಿಚಾರಗಳನ್ನಷ್ಟೆ ಅಳವಡಿಸಿದ್ದಾರೆ. ಸಂವಿಧಾನ ಪ್ರತಿ ವ್ಯಕ್ತಿಯ ದೈನಂದಿನ ಜೀವನವನ್ನು ನಿಯಂತ್ರಿಸುತ್ತದೆ. ಪ್ರತಿ ಹೆಜ್ಜೆಗೂ ಕಾನೂನು ಪಾಲನೆ ಮಾಡಬೇಕಾಗುವುದರಿಂದ ಕಾನೂನು ಮಾನವನ ಜೀವನದ ಅವಿಭಾಜ್ಯ ಅಂಗವಾಗಿದೆ. ಆದ್ದರಿಂದ ಕಾನೂನಿನ ಬಗ್ಗೆ ಎಲ್ಲರೂ ತಿಳಿದುಕೊಳ್ಳುವುದು ಅವಶ್ಯವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಪಿ.ಬಸವರಾಜ, ಸಂವಿಧಾನದಲ್ಲಿ ಅಳವಡಿಸಿರುವ ಎಲ್ಲಾ ಕಾನೂನುಗಳನ್ನು ತಿಳಿದುಕೊಳ್ಳಲು ಸಾಧ್ಯವಿಲ್ಲ. ಪ್ರತಿನಿತ್ಯದ ಚಟುವಟಿಕೆಗಳನ್ನು ನೆಮ್ಮದಿಯಾಗಿ ನಡೆಸಲು ಕಾನೂನು ಅರಿವು ಪಡೆಯುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಅ.02 ರಿಂದ ನ.14 ರವರೆಗೆ ನಿರಂತರವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಕಾನೂನಿನ ಬಗೆಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಕಾನೂನು ಪ್ರಚಾರ ಮಾಡುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು ಸೇರಿದಂತೆ ಹೆಚ್ಚಾಗಿ ಮಹಿಳೆಯರ ಪಾತ್ರ ಹಿರಿಯದು. ಮಹಿಳೆಯರು ಕಾನೂನಿನ ಕುರಿತು ತಿಳಿದುಕೊಂಡ ವಿಚಾರಗಳನ್ನು ತಮ್ಮ ಕುಟುಂಬಸ್ಥರು, ಅಕ್ಕಪಕ್ಕದ ಮನೆಯವರೊಂದಿಗೆ ಹಂಚಿಕೊಳ್ಳುವ ಮೂಲಕ ಕಾನೂನಿನ ಕುರಿತು ಅರಿವು ಮೂಡಿಸುತ್ತಾರೆ ಎಂದು ತಿಳಿಸಿದರು.

ಬೈಕ್ ರ‍್ಯಾಲಿ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಅಭಿಯೋಜನೆ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಪ್ಯಾನ್ ಇಂಡಿಯಾ ಅವೆರ್‌ನೆಸ್ ಅಂಡ್ ಔಟ್‌ರೀಚ್ ಕಾರ್ಯಕ್ರಮದ ಅಂಗವಾಗಿ ನಗರದ ಜಿಲ್ಲಾ ನ್ಯಾಯಾಲಯದ ಆವರಣದಿಂದ ಹೊರಟ ಬೈಕ್ ರ‍್ಯಾಲಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ರಾಜೇಶ್ವರಿ ಎನ್ ಹೆಗಡೆ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

 

ಕಾರ್ಯಕ್ರಮದಲ್ಲಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀಪಾದ್.ಎನ್, ಕೌಟುಂಬಿಕ ನ್ಯಾಯಾಲಯ ನ್ಯಾಯಾಧೀಶ ದಶರಥ.ಬಿ., ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರೀತಿ ಸದರ ಜೋಷಿ, ಹಿರಿಯ ಸಿವಿಲ್ ನ್ಯಾಯಾಧೀಶ ಪ್ರವೀಣ್ ನಾಯಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ ಕುಮಾರ. ಕೆ.ಹೆಚ್., ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ ಉಪನಿರ್ದೇಶಕ (ಅಭಿವೃದ್ಧಿ) ಲಿಂಗರಾಜು.ಕೆ.ಹೆಚ್., ಶಿಕ್ಷಣಾಧಿಕಾರಿ ಜಗದೀಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ (ಆಡಳಿತ) ತಿಪ್ಪೇಶಪ್ಪ.ಜಿ.ಆರ್, ಎಲ್ಲಾ ನ್ಯಾಯಾಧೀಶರು ಮತ್ತು ಸರ್ಕಾರಿ ಅಭಿಯೋಜಕರು, ಪ್ಯಾನಲ್ ವಕೀಲರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!