ಕ್ವಿಟ್ ಇಂಡಿಯಾ ನೆನಪಿನಲ್ಲಿ ಕಾರ್ಮಿಕ, ರೈತ, ಕೃಷಿಕೂಲಿಕಾರರ ವಿವಿಧ ಬೇಡಿಕೆಗಾಗಿ ಪ್ರತಿಭಟನೆ
ದಾವಣಗೆರೆ: ಆಗಸ್ಟ್ 9 ರ ವಿವಿಧ ಐತಿಹಾಸಿಕ ‘ಕ್ವಿಟ್ ಇಂಡಿಯಾ’ ಚಳವಳಿ ನೆನಪಿನಲ್ಲಿ ಕಾರ್ಮಿಕರ-ರೈತರ-ಕೃಷಿಕೂಲಿಕಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್, ಪ್ರತಿಭಟನೆ*ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಜಿಲ್ಲಾ ಸಮಿತಿ ನಗರದಲ್ಲಿಂದು ಪ್ರತಿಭಟನೆ ನಡೆಸಿತು.
ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟಿಸಿ, ತಹಸಿಲ್ದಾರರ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಸಂಹಿತೆಗಳು ಹಾಗೂ ಜನ ವಿರೋಧಿ ಕೃಷಿ ಕಾನೂನುಗಳು ಮತ್ತು ವಿದ್ಯುತ್ ತಿದ್ದುಪಡಿ ಮಸೂದೆಯನ್ನು ರದ್ದುಪಡಿಸಬೇಕು.
ರೈತರ ಎಲ್ಲಾ ಬೆಳೆಗಳಿಗೂ ಖಾತರಿ ಖರೀದಿಯೊಂದಿಗೆ ಸಮಗ್ರ ಉತ್ಪಾದನಾ ವೆಚ್ಚ ಮತ್ತು ಶೇಕಡಾ 50% ಪ್ರಕಾರ (ಅ2+50%) ನಿಗದಿಪಡಿಸಿದ ಕನಿಷ್ಠ ಬೆಂಬಲ ಬೆಲೆ (ಒSP) ಯನ್ನು ಖಾತರಿಯಾಗಿ ದೊರೆಯುವಂತೆ ಕಾಯ್ದೆ ಮಾಡಬೇಕು. ಮತ್ತು ಋಣಮುಕ್ತ ಕಾಯ್ದೆಯನ್ನು ಅಂಗೀಕರಿಸಿ ಜಾರಿಗೊಳಿಸಬೇಕು.
ರಾಜ್ಯ ಸರ್ಕಾರ ಶ್ರೀಮಂತರಿಗೆ ಅನುಕೂಲವಾಗುವಂತೆ ಭೂಸುಧಾರಣ ಕಾಯ್ದೆಗೆ ಮಾಡಿರುವ ತಿದ್ದುಪಡಿಯನ್ನು ಹಿಂಪಡೆಯಬೇಕೆಂದೂ, ಭೂಮಿ ಇಲ್ಲದ ಬಡವರು ಸಾಗುವಳಿ ಮಾಡುತ್ತಿರುವ ಸರ್ಕಾರಿ ಭೂಮಿಗೆ ಸಾಗುವಳಿ ಚೀಟಿನೀಡಿ ಸಕ್ರಮಗೊಳಿಸಬೇಕು ನಿವೇಶನ ರಹಿತರಿಗೆ ನಿವೇಶನ/ವಸತಿ ಹಂಚಿಕೆ ಮಾಡಲು “ಸಮಗ್ರ ಯೋಜನೆ” ಯೊಂದನ್ನು ಘೋಷಣೆ ಮಾಡಬೇಕು.
ರಾಜ್ಯದ ಭೂಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಜಾನುವಾರು ಹತ್ಯಾ ಕಾಯಿದೆಗಳ ಜನವಿರೋಧಿ ತಿದ್ದುಪಡಿಯನ್ನು ರಾಜ್ಯ ಸರ್ಕಾರ ವಾಪಸ್ಸು ಪಡೆಯಬೇಕು ಎಂದು ಆಗ್ರಹಿಸಿದರು.
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಖಾದ್ಯ ತೈಲ ಇತ್ಯಾದಿ ಎಲ್ಲಾ ಅಗತ್ಯ ಸರಕುಗಳ ಬೆಲೆಯಲ್ಲಿ ಆಗಿರುವ ತೀವ್ರ ಏರಿಕೆಯನ್ನು ನಿವಾರಿಸಬೇಕು.
ಉದ್ಯೋಗ ಕಡಿತ ಅಥವಾ ವೇತನ ಕಡಿತ ಮಾಡಬಾರದು. ಕರೋನಾ ಪಿಡುಗಿನ ಅವಧಿಯಲ್ಲಿ ಆದ ಉದ್ಯೋಗ ಹಾಗೂ ವೇತನ ನಷ್ಟಕ್ಕೆ ಪರಿಹಾರ ನೀಡಬೇಕು. ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಬೇಕು. ಸರ್ಕಾರಿ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಗ್ರಾಮಪಂಚಾಯಿತಿ ನೌಕರರನ್ನು ಖಾಯಂಗೊಳಿಸಬೇಕು. ಹಾಗೂ ಬಾಕಿ ಇರುವ ವೇತನವನ್ನು ಕೂಡಲೇ ಪಾವತಿಸಬೇಕು.
ಎಲ್ಲಾ ವಲಸೆ ಹಾಗೂ ಅಸಂಘಟಿತ ವಲಯಗಳ ಕಾರ್ಮಿಕರನ್ನು ನೊಂದಣಿ ಮಾಡಬೇಕು. ಮತ್ತು ಪರಿಹಾರ ನೀಡಬೇಕು. ದಿನಗೂಲಿ, ಗುತ್ತಿಗೆ, ಯೋಜನಾ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಸೇರಿದಂತೆ ಎಲ್ಲಾ ಕಾರ್ಮಿಕರಿಗೆ ಕನಿಷ್ಠ ವೇತನ, ಸಾಮಾಜಿಕ ಸುರಕ್ಷೆ ಮತ್ತು ಪಿಂಚಣಿಯನ್ನು ಖಾತರಿಪಡಿಸಬೇಕು. ಆಹಾರ ಕಿಟ್‍ಗಳನ್ನು ನೀಡಬೇಕು.
ಕರ್ನಾಟಕದಲ್ಲಿ ಕಟ್ಟಡ ಕಾರ್ಮಿಕರಿಗೆ ನೀಡಲಾದ ಆಹಾರ ಕಿಟ್, ಟೂಲ್ ಕಿಟ್‍ಗಳ ಅವ್ಯವಹಾರವನ್ನು ತನಿಖೆಗೊಳಪಡಿಸಬೇಕು ಮತ್ತು ಬೋಗಸ್ ಕಾರ್ಡ್‍ಗಳನ್ನು ನಿಯಂತ್ರಣಗೊಳಪಡಿಸಿ ಎಲ್ಲಾ ನೈಜ ಕಾರ್ಮಿಕರಿಗೆ ಎಲ್ಲ ಸೌಲಭ್ಯಗಳನ್ನು ಖಾತ್ರಿಗೊಳಿಸಬೇಕು.
ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಗೆ ಬಡ್ಜೆಟ್ ಅನುದಾನವನ್ನು ಹೆಚ್ಚಿಸಿ ದಿನಕ್ಕೆ 600 ರೂ. ನಂತೆ ಕನಿಷ್ಠ 200 ದಿನಗಳ ಕೆಲಸ ಖಾತರಿಪಡಿಸಬೇಕು. ನಗರ ಉದ್ಯೋಗ ಖಾತರಿ ಕಾಯ್ದೆಯನ್ನು ಅಂಗೀಕರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ ಮಾಡಲಾಯಿತು.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಸಂಚಾಲಕ ಕೆ.ಹೆಚ್. ಆನಂದರಾಜು, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಇ. ಶ್ರೀನಿವಾಸ್, ಕಟ್ಟಡ ಕಾರ್ಮಿಕ ಸಂಘದ ಹೊನ್ನೂರು ತಿಮ್ಮಣ್ಣ, ಗ್ರಾಮ ಪಂಚಾಯತಿ ನೌಕರರ ಸಂಘದ ಉಮೇಶ್, ದೇವದಾಸಿ ವಿಮೋಚನ ಸಂಘದ ನೇರ್ಲಿಗಿ ಭಾಗ್ಯ, ಹಾಸ್ಟೆಲ್ ಹೊರಗುತ್ತಿಗೆ ನೌಕರರ ಸಂಘದ ಹಾಲೇಶನಾಯ್ಕ,ಸೇರಿದಂತೆ ಇತರರು ಇದ್ದರು