ಪದವಿ ಪೂರ್ವ ಶಿಕ್ಷಣ ಇಲಾಖೆಗೆ ನೂತನ ಉಪನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಆರ್.ಪುಟ್ಟಸ್ವಾಮಿ
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ನೂತನ ಉಪನಿರ್ದೇಶಕರಾಗಿ ನೇಮಕಗೊಂಡು ಅಧಿಕಾರ ಸ್ವೀಕರಿಸಿದ ಆರ್.ಪುಟ್ಟಸ್ವಾಮಿ ರವರಿಗೆ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ವತಿಯಿಂದ ಅಭಿನಂದಿಸಲಾಯಿತು. ಅಭಿನಂದನಾ ಸ್ವೀಕರಿಸಿದ ಮಾನ್ಯ ಉಪನಿರ್ದೇಶಕರು ಪ್ರಾಚಾರ್ಯರ ಮತ್ತು ಉಪನ್ಯಾಸಕರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿ, ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿದರು. ಹಾಗರಯೇ ಜಿಲ್ಲಾ ಪ್ರಾಚಾರ್ಯರ ಮತ್ತು ಉಪನ್ಯಾಸಕರ ಸಂಘದ ಸಹಕಾರ ಕೋರಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷ ರಂಗಪ್ಪ, ಕಾರ್ಯದರ್ಶಿ ಕೆ.ನಾಗರಾಜ್ ಬ್ಯಾಲಹಾಳ್, ಖಜಾಂಚಿ ಎಂ.ರವೀಶ್, ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್.ಲಕ್ಷ್ಮಣ, ಚಿತ್ರದುರ್ಗ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ನಾಗರಾಜ್, ಪ್ರಾಚಾರ್ಯರಾದ ದೇವೇಂದ್ರಪ್ಪ, ಉಪನ್ಯಾಸಕರಾದ ವಿ.ಚನ್ನಬಸಪ್ಪ ಹಾಗೂ ಇತರರು ಹಾಜರಿದ್ದರು.