ರಾಹುಲ್ ಅನರ್ಹ: ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಿದ ಕಾಂಗ್ರೆಸ್
ನವದೆಹಲಿ: ಸಮಾನ ಮನಸ್ಕ ವಿಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣಿದಲ್ಲಿ ಸೋಮವಾರ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಬಿಆರ್‌ಎಸ್, ಸಮಾಜವಾದಿ ಪಕ್ಷ ಸೇರಿದಂತೆ ಹಲ ಪಕ್ಷಗಲು ಪಾಲ್ಗೊಂಡಿವೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಡಿಎಂಕೆ, ಸಮಾಜವಾದಿ ಪಕ್ಷ, ಜೆಡಿ (ಯು), ಬಿಆರ್‌ಎಸ್, ಸಿಪಿಐ (ಎಂ), ಸಿಬಿಐ, ಆರ್‌ಜೆಡಿ, ಎನ್‌ಸಿಪಿ, ಐಯುಎಂಎಲ್, ಎಂಡಿಎಂಕೆ, ಕೇರಳ ಕಾಂಗ್ರೆಸ್, ಟಿಎಂಸಿ, ಆರ್‌ಎಸ್‌ಪಿ, ಎಎಪಿ, ಎನ್‌ಪಿ ಮತ್ತು ಶಿವಸೇನೆ (ಯುಬಿಟಿ) ಪಕ್ಷಗಳ ನಾಯಕರು ಭೇಟಿಯಾದರು.
ಪ್ರಮುಖವಾಗಿಯೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಮತ್ತು ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ.