ರಾಹುಲ್ ಸಂಸತ್ ಸದಸ್ಯತ್ವದಿಂದ ವಜಾ: ಪಾಲಿಕೆ ಮುಂಬಾಗ ಧರಣಿ ಸತ್ಯಾಗ್ರಹ

ದಾವಣಗೆರೆ: ಕೇಂದ್ರ ಬಿಜೆಪಿ ಸರ್ಕಾರ ನ್ಯಾಯಾಂಗ ವ್ಯವಸ್ಥೆ ಬಳಸಿಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿರುವುದನ್ನು ಹಾಗೂ ಸಂಸತ್ ಸದಸ್ಯತ್ವದಿಂದ ವಜಾ ಮಾಡಿರುವುದನ್ನು ವಿರೋಧಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ದಿನಾಂಕ 26.3.2023ನೇ ಭಾನುವಾರ ಶುಕ್ರವಾರ ಬೆಳಗ್ಗೆ 11 ಗಂಟೆಯಿಂದ 5 ಗಂಟೆವರೆಗೆ ನಗರಪಾಲಿಕೆ ಮುಂಭಾಗ ಜಿಲ್ಲಾಧ್ಯಕ್ಷರಾದ ಎಚ್.ಬಿ ಮಂಜಪ್ಪನವರ ಅಧ್ಯಕ್ಷತೆಯಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನೆಯಲ್ಲಿ ಪಕ್ಷದ ಜನಪ್ರತಿನಿಧಿಗಳು, ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಸಮಿತಿ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಪಾಲಿಕೆ ಸದಸ್ಯರು, ವಾರ್ಡ್ ಪಂಚಾಯತ್ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ, ಮಹಾಪೌರ ವಿನಾಯಕ್ ಪೈಲ್ವಾನ್, ಪಾಲಿಕೆ ಮಾಜಿ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್, ಬ್ಲಾಕ್ ಅಧ್ಯಕ್ಷರುಗಳಾದ ಅಯೂಬ್ ಪೈಲ್ವಾನ್, ಕೆ.ಜಿ ಶಿವಕುಮಾರ್, ಜಿ.ಸಿ ನಿಂಗಪ್ಪ, ಮಾಗನಹಳ್ಳಿ ಪರಶುರಾಮ್ ತಿಳಿಸಿದ್ದಾರೆ.