ದಾವಣಗೆರೆ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ದದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿರುವುದಕ್ಕೆ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಪ್ರಧಾನ ಕಾರ‍್ಯದರ್ಶಿ ದಿನೇಶ್ ಕೆ.ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ.
ಸುಪ್ರೀಂಕೋರ್ಟ್ ಈ ತೀರ್ಪಿನಿಂದ ಸತ್ಯಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದಿರುವ ಅವರು ಕೇರಳದ ವೈಯನಾಡು ಲೋಕಸಭೆ ಕ್ಷೇತ್ರದ ಸಂಸದರಾಗಿ ಮುಂದುವರಿಯಲಿದ್ದು, ಕೇಂದ್ರದ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಎಳೆ-ಎಳೆಯಾಗಿ ದೇಶದ ಜನತೆಯ ಗಮನಕ್ಕೆ ತರಲಿದ್ದಾರೆ ಎಂದು ತಿಳಿಸಿದ್ದಾರೆ. ಒಂದಲ್ಲಾ ಒಂದು ದಿನ ಸತ್ಯಕ್ಕೆ ಗೆಲುವು ಸಿಕ್ಕೆ ಸಿಗುತ್ತೆ, ಇವತ್ತಲ್ಲದಿದ್ದರೆ ನಾಳೆ ಅಥವಾ ನಾಡಿದ್ದು ಜಯ ಸಿಗುತ್ತದೆ. ರಾಹುಲ್ ಗಾಂಧಿ ಅವರ ಹಾದಿ ಸ್ಪಷ್ಟವಾಗಿದ್ದು, ಸತ್ಯಕ್ಕೆ ನ್ಯಾಯಾಲಯ ಬೆಂಬಲ ನೀಡಿದ್ದು, ನ್ಯಾಯಾಲಯಕ್ಕೆ ಧನ್ಯವಾದ ಸಲ್ಲಿಸಿದ್ದು, ಇದು ಪ್ರಜಾಪ್ರಭುತ್ವದ ಗೆಲುವು, ಸತ್ಯ ಮೇವ ಜಯತೇ ಎಂದು ಬಣ್ಣಿಸಿದ್ದಾರೆ.
