ಕರ್ನಾಟಕದ ಹೆಮ್ಮೆ – ನಮ್ಮ ನಂದಿನಿ ಎಂದು ಉತ್ಪನ್ನ ಸವಿದು ಟ್ವಿಟ್ ಮಾಡಿದ ರಾಹುಲ್ ಗಾಂಧಿ

ಬೆಂಗಳೂರು : ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಬೆಂಗಳೂರಿನ ಜೆ.ಪಿ. ನಗರದಲ್ಲಿ ರಸ್ತೆ ಬದಿಯಲ್ಲಿದ್ದ ಕೆಎಂಎಫ್ ಬೂತ್‌ಗೆ ತೆರಳಿ ನಂದಿನಿ ಪೇಡೆ ಮತ್ತು ಐಸ್ ಕ್ರೀಂ ಸವಿದರು.
ಜೆಪಿ ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳು ಹಾಗೂ ಇತರೆ ರ್ಸಾಜನಿಕರೊಂದಿಗೆ ಆಯೋಜಿಸಲಾಗಿದ್ದ ಸಂವಾದ ಸಭೆಯಲ್ಲಿ ಭಾಗಗವಹಿಸಿ ಮಾತನಾಡಿದ ರಾಹುಲ್ ಗಾಂಧಿ ಅವರು, ಪಕ್ಕದಲ್ಲಿಯೇ ಇದ್ದ ಕೆಎಂಎಫ್ ಬೂತ್‌ಗೆ ತೆರಳಿ ಅಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಪರಿಶೀಲನೆ ಮಾಡಿದರು.
Karnataka’s Pride – NANDINI is the best! pic.twitter.com/Ndez8finup
— Rahul Gandhi (@RahulGandhi) April 16, 2023
ನಂತರ ನಂದಿನಿ ಪೇಡೆಗಳನ್ನು ತಿಂದು ಬಾಯಿ ಚಪ್ಪರಿಸಿದರು. ನಂತರ, ನಂದಿನಿ ಐಎಸ್‌ಕ್ರೀಂಗಳನ್ನು ತಿಂದು, ಅಲ್ಲಿ ಜೊತೆಗಿದ್ದ ಹಲವರಿಗೆ ನಂದಿನಿ ಐಸ್‌ಕ್ರೀಂಗಳನ್ನು ಕೊಡಿಸಿದರು.
ಬೂತ್ ಮಾಲೀಕನೊಂದಿಗೆ ಮಾತುಕತೆ ನಡೆಸಿದ ರಾಹುಲ್ ಗಾಂಧಿ ನಂದಿನಿ ಉತ್ಪನ್ನಗಳು ಎಲ್ಲಿಂದ ಬರುತ್ತವೆ. ಎಷ್ಟು ವರ್ಷದಿಂದ ನೀವು ಈ ಕೆಲಸ ಮಾಡುತ್ತಿದ್ದೀರಿ? ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಅಂಗಡಿ ಮಾಲೀಕ ಬಳ್ಳಾರಿಯಿಂದ ನಂದಿನಿ ಉತ್ಪನ್ನಗಳು ಬರುತ್ತವೆ ಎಂದು ಮಾಹಿತಿ ನೀಡಿದರು.