20ರಂದು ಬೆಳಗಾವಿಗೆ ರಾಹುಲ್ 18-19ರ ಪ್ರಜಾಧ್ವನಿ ಯಾತ್ರೆ ಮುಂದೂಡಿಕೆ

Rahul to Belgaum on 20th  Postponement of 18-19 Prajadhwani Yatra

20ರಂದು ಬೆಳಗಾವಿಗೆ ರಾಹುಲ್ 18-19ರ ಪ್ರಜಾಧ್ವನಿ ಯಾತ್ರೆ ಮುಂದೂಡಿಕೆ

ಬೆಳಗಾವಿ: ಇದೇ ಮಾರ್ಚ್ 20ರಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬೆಳಗಾವಿಗೆ ಆಗಮಿಸಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ ಜಿಲ್ಲೆಗಳ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಮುಖಂಡರು, 2018ರ ವಿಧಾನಸಭೆ ಚುನಾವಣೆ ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಈ ಸಭೆಯಲ್ಲಿ ಭಾಗವಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾರ್ಚ್‌ 18, 19ರಂದು ಬೆಳಗಾವಿ ಜಿಲ್ಲೆಯಲ್ಲಿ ನಡೆಯಬೇಕಿದ್ದ ‘ಪ್ರಜಾಧ್ವನಿ’ ಯಾತ್ರೆಯನ್ನು ರಾಹುಲ್ ಗಾಂಧಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!