ರಾಜ್ಯ ಸುದ್ದಿ

Rain; ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ದಾವಣಗೆರೆ ಜಿಲ್ಲಾದ್ಯಂತ ಕೃಪೆ ತೋರಿದ ವರುಣ: ಕೃಷಿ ಚಟುವಟಿಕೆಗಳು ಚುರುಕು

ಬೆಂಗಳೂರು, ಸೆ.05:  ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಇಂದು ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಕಳೆದ ಎರಡು ದಿನದ ಹಿಂದೆ ಮಳೆಯಾಗಿದ್ದು, ಮೋಡ ಕವಿದ ವಾತಾವರಣ ಮುಂದುವರೆದಿದೆ. ಕರಾವಳಿ ವಲಯದಲ್ಲಿ ಜಾಸ್ತಿ ಮಳೆಯಾಗುವ ಸಂಭವವಿದೆ. ಇನ್ನು ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಧ್ಯ ಕರ್ನಾಟಕದ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

congress; ಸಿದ್ಧಾಂತ ಒಪ್ಪುವವರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಲಾಗುವುದು: ಮುಖ್ಯಮಂತ್ರಿ

ಮಂಗಳೂರು, ಉಡುಪಿ, ಉತ್ತರ ಕನ್ನಡದ ಕರಾವಳಿ ಭಾಗಗಳಲ್ಲಿ ವರುಣ ಆರ್ಭಟ ಜೋರಾಗಲಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದ ದಕ್ಷಿಣ ಭಾಗ, ಉತ್ತರ ಕನ್ನಡದ ಪೂರ್ವಭಾಗ, ಧಾರವಾಡ, ಹಾವೇರಿ, ಗದಗ, ವಿಜಯನಗರ ಜಿಲ್ಲೆಗೆ ಸಾಧಾರಣ ಮಳೆಯಾಗಬಹುದು. ಮೈಸೂರು, ಚಾಮರಾಜನಗರ, ಮಂಡ್ಯದ ದಕ್ಷಿಣ – ಪಶ್ಚಿಮ, ಚಿತ್ರದುರ್ಗ, ಬಳ್ಳಾರಿ, ಹುಬ್ಬಳ್ಳಿ ಧಾರವಾಡದ ಉತ್ತರ ಭಾಗ, ಬೆಳಗಾವಿ, ಬಾಗಲಕೋಟೆಗೆ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!