ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಹೆಚ್ಚು ಮಳೆಯಾಗುತ್ತಿದ್ದು ಜಿಲ್ಲೆಯ ಎಲ್ಲಾ ತರಹದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜುಲೈ 27 ರಂದು ದಾವಣಗೆರೆ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಧಿಕಾರಿಗಳ ಸೂಚನೆಯಂತೆ ದಾವಣಗೆರೆ ವಾರ್ತಾ ಇಲಾಖೆಯ ಹಿರಿಯ ಉಪ ನಿರ್ದೇಶಕರ ಮೂಲಕ ಮಾಧ್ಯಮದವರಿಗೆ ಮಾಹಿತಿ ನೀಡಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ದಿನಾಂಕ 27-07-2023 ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ದಿನವನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಲು ತಿಳಿಸಿದೆ ಎಂದು ದಾವಣಗೆರೆ ಜಿಲ್ಲೆಯ ಉಒ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಇವರಿಂದ ಪ್ರಕಟಣೆ ಹೊರಡಿಸಲಾಗಿದೆ.
