Rain School Holiday: ಭಾರಿ ಮಳೆ: ಜಗಳೂರು ಹೊನ್ನಾಳಿ ನ್ಯಾಮತಿ ಚನ್ನಗಿರಿಯ ಶಾಲೆಗಳಿಗೆ ಜುಲೈ 24 ರಂದು ರಜೆ
ದಾವಣಗೆರೆ: ರಾಜ್ಯಾದ್ಯಂತ ಬಿಟ್ಟುಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಕೆಲ ತಾಲ್ಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಾವಣಗೆರೆ ಜಿಲ್ಲೆಯ ಆಯಾ ತಾಲ್ಲೂಕಿನ ತಹಸೀಲ್ದಾರ್ ಹಾಗೂ ಬಿಇಓ ಗಳು ಮಳೆಯ ಬಗ್ಗೆ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ತೀರ್ಮಾನ ತೆಗೆದುಕೊಳ್ಳುಲು ಸೂಚಿಸಲಾಗಿತ್ತು ಅದರಂತೆ ಸಧ್ಯಕ್ಕೆ ಹೊನ್ನಾಳಿ, ನ್ಯಾಮತಿ, ಚನ್ನಗಿರಿ, ಜಗಳೂರು ತಾಲ್ಲೂಕಿನ ಎಲ್ಲಾ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಗರುಡವಾಯ್ಸ್ ಗೆ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ನೀಡಿದ ಸೂಚನೆ ಮೇರೆಗೆ ಚನ್ನಗಿರಿ ತಾಲ್ಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿನ್ನಲೆಯಲ್ಲಿ ದಿನಾಂಕ:24-07-2023 ರಂದು ಸರ್ಕಾರಿ .ಅನುದಾನಿತ. ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ ಘೋಷಿಸಲಾಗಿದೆ. ಸದರಿ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನೆಡೆಸುವ ಮೂಲಕ ಶಾಲಾ ದಿನಗಳನ್ನು ಹೊಂದಾಣಿಕೆ ಮಾಡಿಕೊಳ್ಳಲು ಮುಖ್ಶ ಶಿಕ್ಷಕರಿಗೆ ತಿಳಿಸಿದೆ ಚನ್ನಗಿರಿ ಬಿಇಒ ತಿಳಿಸಿದ್ದಾರೆ.
ಅದೇ ರೀತಿ ಹೊನ್ನಾಳಿ – ನ್ಯಾಮತಿ ಅವಳಿ ತಾಲೂಕಿನಲ್ಲಿ ಹೆಚ್ಚು ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ದಾವಣಗೆರೆ ಜಿಲ್ಲೆ ರವರ ಸೂಚನೆ ಮೇರೆಗೆ ಉಪನಿರ್ದೇಶಕರು ಆಡಳಿತ ದಾವಣಗೆರೆ ಜಿಲ್ಲೆ ಹಾಗೂ ತಹಸೀಲ್ದಾರ್ ಹೊನ್ನಾಳಿ ಇವರ ಗಮನಕ್ಕೆ ತಂದು ದಿನಾಂಕ.24.07.23 ರಂದು ಅವಳಿ ತಾಲೂಕಿನ ಎಲ್ಲಾ ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸದರಿ ರಜೆಯನ್ನು ಮುಂದಿನ ರಜಾ ದಿನಗಳಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳಲು ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಿದೆ ಎಂದು ಹೊನ್ನಾಳಿ ಬಿಇಒ ತಿಳಿಸಿದ್ದಾರೆ.
ಇದೇ ರೀತಿ ಬರದಿಂದ ತತ್ತರಿಸಿದ್ದ ಜಗಳೂರು ತಾಲ್ಲೂಕಿನಲ್ಲಿ ಕೂಡ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ 24-07-2023 ರಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ದಾವಣಗೆರೆ ಹಾಗೂ ಹರಿಹರ ತಾಲ್ಲೂಕಿನ ಶಾಲೆಗಳಿಗೆ ಇದುವರೆಗೂ ರಜೆ ಘೋಷಣೆ ಮಾಡಲಾಗಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.