ದಾವಣಗೆರೆ ಜಿಲ್ಲೆಯ ಜುಲೈ 25 ರ ಮಳೆ ವಿವರ

ದಾವಣಗೆರೆ ಜಿಲ್ಲೆಯ ಜುಲೈ 25 ರ ಮಳೆ ವಿವರ
ದಾವಣಗೆರೆ : ಜಿಲ್ಲೆಯಲ್ಲಿ ಜುಲೈ 23 ರಂದು ಬಿದ್ದ ಮಳೆಯ ವಿವರದನ್ವಯ 13.3 ಮಿ.ಮೀ. ಸರಾಸರಿ ಮಳೆಯಾಗಿದೆ. ಅಧಿಕ ಮಳೆಯಿಂದ ರೂ. 19.295 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ.ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.
ಚನ್ನಗಿರಿಯಲ್ಲಿ ವಾಡಿಕೆ ಮಳೆ 4.5 ಮಿ.ಮೀ ಹಾಗೂ ವಾಸ್ತವ ಮಳೆ 14.8 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆ 2 ಮಿ.ಮೀ ಹಾಗೂ ವಾಸ್ತವ ಮಳೆ 16.5 ಮಿ.ಮೀ, ಹರಿಹರದಲ್ಲಿ ವಾಡಿಕೆ ಮಳೆ 2.3 ಮಿ.ಮೀ ಹಾಗೂ ವಾಸ್ತವ ಮಳೆ 15.4 ಮಿ.ಮೀ, ಹೊನ್ನಾಳಿ ವಾಡಿಕೆ ಮಳೆ 2.8 ಮಿ.ಮೀ ಹಾಗೂ ವಾಸ್ತವ ಮಳೆ 11.8 ಮಿ.ಮೀ, ಜಗಳೂರು ವಾಡಿಕೆ ಮಳೆ 4.4 ಮಿ.ಮೀ ಹಾಗೂ ವಾಸ್ತವ ಮಳೆ 5.6 ಮಿ.ಮೀ,  ನ್ಯಾಮತಿಯಲ್ಲಿ ವಾಡಿಕೆ ಮಳೆ 4.9 ಮಿ.ಮೀ ಹಾಗೂ ವಾಸ್ತವ ಮಳೆ 19.5 ಮಿ.ಮೀ ಮಳೆಯಾಗಿದೆ.
ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 6 ಮನೆಗಳು ಭಾಗಶಃ ಹಾನಿಯಾಗಿದ್ದು ರೂ. 1.80 ಲಕ್ಷ ಹಾಗೂ ಒಂದು ದನದ ಕೊಟ್ಟಿಗೆ ಹಾನಿಯಾಗಿ ರೂ.10 ಸಾವಿರ ಅಂದಾಜು ನಷ್ಟ ಸಂಭವಿಸಿದೆ.ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 6 ಮನೆ ಭಾಗಶಃ ಹಾನಿಯಾಗಿದ್ದು ರೂ. 1.80 ಲಕ್ಷ ಅಂದಾಜು ನಷ್ಟ ಹಾಗೂ 1 ದನದ ಕೊಟ್ಟಿಗೆ ಹಾನಿಯಾಗಿ 10 ಸಾವಿರ ಅಂದಾಜು ನಷ್ಟ ಸಂಭವಿಸಿದೆ.
ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 3 ಮನೆಗಳು ಭಾಗಶಃ ಹಾನಿಯಾಗಿದ್ದು ರೂ. 19.5 ಸಾವಿರ ಹಾಗೂ 1 ಎಕರೆ ಬೆಳೆ ಹಾನಿಯಾಗಿ ಅಂದಾಜು ರೂ.50 ಸಾವಿರದಷ್ಟು ನಷ್ಟ ಸಂಭವಿಸಿದೆ.  ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಮನೆ ತೀವ್ರ ಹಾನಿಯಾಗಿದ್ದು ಅಂದಾಜು ರೂ.1.90 ಲಕ್ಷ ಹಾಗೂ 2 ಮನೆ ಭಾಗಶಃ ಹಾನಿಯಾಗಿದ್ದು ರೂ. 1.10 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಮನೆ ಭಾಗಶಃ ಹಾನಿಯಾಗಿದ್ದು, ರೂ. 50 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ.
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 4 ಮನೆ ತೀವ್ರ ಹಾನಿಯಾಗಿದ್ದು ಅಂದಾಜು ರೂ.8.10 ಲಕ್ಷ ಹಾಗೂ 3 ಮನೆ ಭಾಗಶಃ ಹಾನಿಯಾಗಿದ್ದು, ರೂ. 1.20 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.ಜಿಲ್ಲೆಯಲ್ಲಿ ಒಟ್ಟಾರೆ ರೂ.19.295 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!