ಜೈಪುರ: ಪ್ರಸಕ್ತ ವರ್ಷದ ಬಜೆಟ್ ಓದುವ ಬದಲು ಕಳೆದ ವರ್ಷದ ಬಜೆಟ್ ಓದುವ ಮೂಲಕ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್‌ಗೆಪಾಟಲಿಗೆ ಈಡಾದ ಘಟನೆ ಶುಕ್ರವಾರ ನಡೆದಿದೆ.
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಬಜೆಟ್ ಅನ್ನು ನೇರಪ್ರಸಾರ ಮಾಡಲಾಗುತ್ತಿತ್ತು! ಹೀಗಾಗಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ.
ಬಜೆಟ್‌ನ ಮೊದಲ ಎರಡು ಘೋಷಣೆಗಳನ್ನು ಮುಖ್ಯಮಂತ್ರಿ ಮಾಡುತ್ತಲೇ ಪ್ರತಿಪಕ್ಷಗಳು ಗದ್ದಲ ಸೃಷ್ಟಿಸಿದವು, ಸದನದ ಬಾವಿಗೆ ನುಗ್ಗಿದವು. ಸಮಾಧಾನದಿಂದ ಇರುವಂತೆ ಸ್ಪೀಕರ್ ಸಿಪಿ ಜೋಶಿ ಅವರು ಕೇಳಿಕೊಂಡರೂ ಪ್ರತಿಪಕ್ಷಗಳು ಗದ್ದಲ ಮುಂದುವರಿಸಿದ್ದರಿಂದ ಸದನವನ್ನು ಅರ್ಧ ಗಂಟೆ ಮುಂದೂಡಲಾಯಿತು.
8 ನಿಮಿಷಗಳ ಕಾಲ ಮುಖ್ಯಮಂತ್ಿಗಳು ಹಳೆಯ ಬಜೆಟ್ ಪ್ರತಿಯನ್ನೇ ಓದಿದರು. ನಾನು ಸಿಎಂ ಆಗಿದ್ದಾಗ ಕನಿಷ್ಠ ಎರಡು-ಮೂರು ಬಾರಿ ಬಜೆಟ್ ಪ್ರತಿ ಓದುತ್ತಿದ್ದೆ ಮತ್ತು ಪರಿಶೀಲಿಸುತ್ತಿದ್ದೆ. ಈ ರೀತಿಯ ದೊಡ್ಡ ದಾಖಲೆಯನ್ನು ನಿರ್ಲಕ್ಷ್ಯದಿಂದ ಓದಿರುವ ಸಿಎಂ ಕೈಯಲ್ಲಿ ರಾಜಸ್ಥಾನ ಎಷ್ಟು ಸುರಕ್ಷಿತವಾಗಿದೆ ಎಂಬುದನ್ನು ಯಾರಾದರೂ ಊಹಿಸಬಹುದು ಎಂದು ಬಿಜೆಪಿ ನಾಯಕಿ, ಮಾಜಿ ಸಿಎಂ ವಸುಂಧರಾ ರಾಜೆ ಸಿಂಧಿಯಾ ಟೀಕಿಸಿದ್ದಾರೆ.
