ರಾಜ್ಯ ಕಾರ್ಯಕಾರಿಣಿ ಸಭೆಗೆ ಸಜ್ಜುಗೊಂಡ ದಾವಣಗೆರೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಸೆ.19ರಂದು ನಡೆಯಲಿರುವ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಗೆ ದಾವಣಗೆರೆ ನಗರ ಸಜ್ಜಾಗಿದೆ. ಬ್ಯಾನರ್‍ಗಳು, ವಿಶೇಷ ಕಟೌಟ್‍ಗಳು, ಬಂಟಿಂಗ್ಸ್‍ಗಳಿಂದ ನಗರವನ್ನು ಅಲಂಕರಿಸಲಾಗಿದೆ.
ಕಾರ್ಯಕ್ರಮದ ಹಿನ್ನೆಲೆಯಲ್ಲಿ ಯುವ ಮೋರ್ಚಾ ಮತ್ತು ಮಹಿಳಾ ಮೋರ್ಚಾದ ಸ್ವಾಗತ ಸಮಿತಿಗಳನ್ನು ರಚಿಸಿದ್ದು ಅವು ಈಗಾಗಲೇ ಕಾರ್ಯಪ್ರವೃತ್ತವಾಗಿವೆ. ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿಗಳೂ ಆದ ಶ್ರೀ ಅರುಣ್ ಸಿಂಗ್ ಅವರು ಈ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ.
ಸೆ.18ರಂದು ಬೆಳಿಗ್ಗೆ ವಿಭಾಗೀಯ ಪ್ರಭಾರಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆ ಮತ್ತು ಸಂಜೆ ರಾಜ್ಯ ಪದಾಧಿಕಾರಿಗಳ ಸಭೆಯೂ ನಡೆಯಲಿದೆ. ಬಳಿಕ ರಾಜ್ಯ ಕೋರ್ ಕಮಿಟಿ ಸದಸ್ಯರ ಜೊತೆ ಚರ್ಚೆಯೂ ನಡೆಯಲಿದೆ.