ರಾಜ್ಯ ಸಭೆ ಚುನಾವಣೆ: ಹಕ್ಕು ಚಲಾಯಿಸಿದ ಶಿವಶಂಕರಪ್ಪ, ಮಲ್ಲಿಕಾರ್ಜುನ್

ಬೆಂಗಳೂರು: ವಿಧಾನಸೌಧದಲ್ಲಿ ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹಾಗೂ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎಸ್.ಮಲ್ಲಿಕಾರ್ಜುನ್ ತಮ್ಮ ಹಕ್ಕು ಚಲಾಯಿಸಿದರು.
ನಾಲ್ಕು ಸ್ಥಾನಗಳಿಗೆ ನಡೆದ ಈ ಚುನಾವಣೆಯ ಫಲಿತಾಂಶ ಮಂಗಳವಾರ ಸಂಜೆ ಪ್ರಕಟವಾಗಿದ್ದು, ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬರು ಜಯಗಳಿಸಿದ್ದಾರೆ.
ಕಾಂಗ್ರೆಸ್​ನ ಅಜಯ್ ಮಕೇನ್, ನಾಸೀರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್​ ಗೆಲ್ಲುವು ಸಾಧಿಸಲಿದ್ದಾರೆ. ಇನ್ನು ನಿರೀಕ್ಷೆಯಂತೆ ಬಿಜೆಪಿಯ ನಾರಾಯಣಸಾ ಭಾಂಡಗೆ ಅವರು ಗೆಲುವು ಸಾಧಿಸಿದ್ದಾರೆ.
ಬಿಜೆಪಿ, ಜೆಡಿಎಸ್‌ ಮೈತ್ರಿಯಿಂದ ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ ರೆಡ್ಡಿ ಅವರು ಸೋಲು ಅನುಭವಿಸಿದ್ದಾರೆ. ಇದರೊಂದಿಗೆ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಖಭಂಗವಾಗಿದೆ.
ಕಾಂಗ್ರೆಸ್​ನ ಅಜಯ್ ಮಾಕೇನ್ -47, ನಾಸೀರ್ ಹುಸೇನ್ – 47, ಜಿ.ಸಿ. ಚಂದ್ರಶೇಖರ – 45 ಮತಗಳೊಂದಿಗೆ ಗೆಲುವು ಸಾಧಿಸಿದರೆ, ಬಿಜೆಪಿಯ ನಾರಾಯಣಸಾ ಭಾಂಡಗೆ 47 ಮತಗಳನ್ನ ಪಡೆದುಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ.

Leave a Reply

Your email address will not be published. Required fields are marked *

error: Content is protected !!