ರಾಜ್ಯ ಎಸ್‌ಟಿ ಮೋರ್ಚ ಉಪಾಧ್ಯಕ್ಷರಾಗಿ ಎಸ್‌ಡಿಕೆ ನೇಮಕ
ದಾವಣಗೆರೆ: ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹೊಣೆ ನೀಡಿದ್ದ ಪಕ್ಷ, ಇದೀಗ ರಾಜ್ಯ ಎಸ್‌ಟಿ ಮೋರ್ಚಾ ಉಪಾಧ್ಯಕ್ಷರನ್ನಾಗಿ ತಮ್ಮನ್ನು ನೇಮಕ ಮಾಡಿದ್ದು, ರಾಜ್ಯ ಮಟ್ಟದಲ್ಲಿ ಪಕ್ಷ ಸಂಘಟಿಸುವ ಜವಾಬ್ದಾರಿ ಹೊತ್ತು ಪಕ್ಷಕ್ಕಾಗಿ ದುಡಿಯುವುದಾಗಿ ಶ್ರೀನಿವಾಸ ಟಿ. ದಾಸಕರಿಯಪ್ಪ ತಿಳಿಸಿದ್ದಾರೆ.
ರಾಜ್ಯ ಬಿಜೆಪಿ ಎಸ್‌ಟಿ ಮೋರ್ಚಾ ನೂತನ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಎಸ್‌ಡಿಕೆ, ಜಿಲ್ಲಾ ಉಪಾಧ್ಯಕ್ಷನಾಗಿ ಪಕ್ಷ ಸಂಘಟಿಸಿರುವುದನ್ನು ಗುರುತಿಸಿ ವರಿಷ್ಠರ ಆದೇಶದ ಮೇರೆಗೆ ರಾಜ್ಯ ಎಸ್‌ಟಿ ಮೋರ್ಚಾ ಉಪಾಧ್ಯಕ್ಷ ಹುದ್ದೆ ನೀಡಲಾಗಿದೆ.
ಜವಾಬ್ದಾರಿ ನೀಡಿದ ಪಕ್ಷದ ಎಲ್ಲ ನಾಯಕರಿಗೆ ಧನ್ಯವಾದ ತಿಳಿಸುವುದಾಗಿ ಹೇಳಿದರು. ಎಸ್ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಆದೇಶದಂತೆ ಶ್ರೀನಿವಾಸ ದಾಸಕರಿಯಪ್ಪ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ.