ರಾಜ್ಯದ ಕೆಲವೆಡೆ ಎರಡ್ಮೂರು ದಿನ ಭಾರಿ ಮಳೆ || ಇಲ್ಲಿದೆ ಹವಾಮಾನ ಇಲಾಖೆಯ ಮಾಹಿತಿ

 

ದಾವಣಗೆರೆ: ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಳ್ಳಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ಕೆಲವೆಡೆ ಎರಡ್ಮೂರು ದಿನ ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ‌

ಉತ್ತರ ಕನ್ನಡ ಕರಾವಳಿಯ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು, ಇಂದು ಮತ್ತು ನಾಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೀದರ್, ಕಲಬುರ್ಗಿ, ವಿಜಯಪುರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ.

ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಹೆಚ್ಚಿನ ಮಳೆಯ ಆಗುವ ಸಾಧ್ಯತೆ ಇರುವುದಾಗಿ ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!