rally;ಡಿ.09 ರಂದು ಶಾಲಾ ಆಟೋ ಮತ್ತು ವ್ಯಾನ್ ರ್ಯಾಲಿ ಉದ್ಘಾಟನೆ ಕಾರ್ಯಕ್ರಮ

School Auto and Van Rally Inaugural Programme on Dec.09

ದಾವಣಗೆರೆ: ದಾವಣಗೆರೆ ಜಿಲ್ಲಾ ಶಾಲಾ ಆಟೋ ಮತ್ತು ವ್ಯಾನ್ ಚಾಲಕರ ಸಂಘದ ಆಶ್ರಯದಲ್ಲಿ ಶಾಲಾ ಆಟೋ ಮತ್ತು ವ್ಯಾನ್ ರ್ಯಾಲಿ rally ಉದ್ಘಾಟನೆ ಕಾರ್ಯಕ್ರಮವನ್ನು ಡಿ.09 ರ ಶನಿವಾರ ಬೆಳಿಗ್ಗೆ 8 ಗಂಟೆಗೆ ಹಾಗೂ ಸಂಜೆ 5 ಗಂಟೆಗೆ ಕರ್ನಾಟಕ ರಾಜ್ಯೋತ್ಸವ ಮತ್ತು ರಸಮಂಜರಿ ಕಾರ್ಯಕ್ರಮವನ್ನು ನಗರದ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಎಸ್.ಎಸ್. ಕೇರ್ ಟ್ರಸ್ಟ್ ಲೈಫ್ ಟ್ರಸ್ಟಿಗಳಾದ ಪ್ರಭಾ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಶಾಲಾ ಆಟೋ ಮತ್ತು ವ್ಯಾನ್ ಚಾಲಕರ ಸಂಘದ ಜಿಲ್ಲಾಧ್ಯಕ್ಷಕರಾದ ಬಿ. ಮಂಜುನಾಥ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಇನ್ನೂ ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆ ಸದಸ್ಯರಾದ ಆಶಾ ಉಮೇಶ್, ಮಾಜಿ ಸದಸ್ಯರಾದ ದಿನೇಶ್ ಕೆ. ಶೆಟ್ಟಿ., ಬಡಾವಣೆ ಪೊಲೀಸ್ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಮಲ್ಲಮ್ಮ ಆರ್. ಚೌಕಿ., ಮಹಾನಗರಪಾಲಿಕೆ ಆಯುಕ್ತರಾದ ರೇಣುಕ, ಕಾಂಗ್ರೆಸ್ ಮುಖಂಡರಾದ ಉಮೇಶ್ ಹಾಗೂ ಜಿಲ್ಲೆಯ ಎಲ್ಲಾ ಶಾಲಾ ಆಟೋ ಮತ್ತು ವ್ಯಾನ್ ಚಾಲಕರು ಉಪಸ್ಥಿತರಿರುವರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!