ಬೆಂಗಳೂರಿನಿಂದ ಬಂದು ತಿಂಗಳು ಪ್ರಚಾರ ನಡೆಸಿ, ಎರಡು ಲಕ್ಷ ದೇಣಿಗೆ ನೀಡಿದ ಹೊನ್ನಾಳಿ ಇಂಜಿನಿಯರ್ ಯುವಕ ರಮೇಶ್.

ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಾ. ಪ್ರಭಾ ಮಲ್ಲಿಕಾರ್ಜುನ್ ರವರು ಇಂದು ನ್ಯಾಮತಿ ಪಟ್ಟಣದಲ್ಲಿ ಬಹಿರಂಗ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಬೆಂಗಳೂರಿನಿಂದ ಬಂದು ಒಂದು ತಿಂಗಳಿನಿಂದ ಡಾ ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಚುನಾವಣೆ ಪ್ರಚಾರ ನಡೆಸುತ್ತಿದ್ದ, ಹೊನ್ನಾಳಿ ತಾಲೂಕಿನ ಸುಂಕದಕಟ್ಟೆ ಗ್ರಾಮದ ಇಂಜಿನಿಯರ್ ಯುವಕ ರಮೇಶ್ ಎರಡು ಲಕ್ಷ ರೂಪಾಯಿ ಹಣವನ್ನು ದೇಣಿಗೆಯಾಗಿ ಡಾ. ಪ್ರಭಾ ಮಲ್ಲಿಕಾರ್ಜುನ್ ರವರಿಗೆ ನೀಡಿದರು.
ನಂತರ ಮಾತನಾಡಿದ ರಮೇಶ್ ಸಾಮಾಜಿಕ ಜಾಲತಾಣದಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್ ರವರ ಸಾಮಾಜಿಕ ಕಾರ್ಯಗಳ ಬಗ್ಗೆ ನೋಡಿದ್ದು, ಸದಾ ಬಡವರ ಬಗ್ಗೆ ಮಿಡಿಯುವ ತಾಯಿ ಹೃದಯದ ಇವರು ಚುನಾವಣೆಯಲ್ಲಿ ಗೆದ್ದು ಸಮಾಜಸೇವೆ ಮಾಡಬೇಕು ಎನ್ನುವ ಉದ್ದೇಶದಿಂದ ಬೆಂಗಳೂರಿನಿಂದ ಬಂದು ಕಳೆದ ಒಂದು ತಿಂಗಳಿನಿಂದ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದು, ಇದೇ ಮೊದಲ ಬಾರಿ ಡಾ. ಪ್ರಭಾ ಮಲ್ಲಿಕಾರ್ಜುನ್ ರವರನ್ನು ನೇರವಾಗಿ ಭೇಟಿ ಮಾಡಿದ್ದಾಗಿ, ಹರ್ಷ ವ್ಯಕ್ತಪಡಿಸಿದ್ದರು ಹಾಗೂ ವಿದ್ಯಾವಂತ ಯುವಕರು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಅವರ ಬೆಂಬಲಕ್ಕೆ ನಿಂತು ಅವರ ಸಮಾಜ ಸೇವೆಯಲ್ಲಿ ಕೈಜೋಡಿಸಲು ಮನವಿ ಮಾಡಿದರು.