ಬೆಂಗಳೂರು : ರಾಮೇಶ್ವರಂ ಕೆಫೆ ಸ್ಪೋಟ: – ಶಂಕಿತ ಆರೋಪಿ ‘ಬಳ್ಳಾರಿಯ ಶಬ್ಬೀರ್’ಎನ್‌ಐಎ ವಶಕ್ಕೆ

ಬೆಂಗಳೂರು: ಮಾರ್ಚ್ 1 ರಂದು ನಡೆದಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ ) ಬುಧವಾರ ಮಹತ್ವರ ಪ್ರಗತಿ ಸಾಧಿಸಿದೆ. ರಾಷ್ಟ್ರೀಯ ಮಾಧ್ಯಮಗಳ ವರದಿಗಳ ಪ್ರಕಾರ ಶಂಕಿತ ಆರೋಪಿಯನ್ನು ಬಳ್ಳಾರಿ ಮೂಲದ ಶಬ್ಬೀರ್ ಎಂದು ಗುರುತಿಸಲಾಗಿದ್ದು, ಈತನನ್ನು ಎನ್‌ಐಎ ವಶಕ್ಕೆ ಪಡೆದಿದೆ.

ಬಳ್ಳಾರಿಯ ಕೌಲ್‌ ಬಜಾರ್‌ ನಿವಾಸಿ ಶಬ್ಬೀರ್‌ನನ್ನು ಇಂದು ಮುಂಜಾನೆ 4 ಗಂಟೆಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದು ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ದಿದ್ದಾರೆ್ ಎನ್ನಲಾಗಿದೆ.

ಮಾರ್ಚ್ 1 ರಂದು ಪ್ರಸಿದ್ಧ ವೈಟ್‌ಫೀಲ್ಡ್ ಉಪಾಹಾರ ಗೃಹ ರಾಮೇಶ್ವರಂ ಕೆಫೆಯಲ್ಲಿ IED ಸ್ಫೋಟದ ನಂತರ ಕನಿಷ್ಠ ಒಂಬತ್ತು ಜನರು ಗಾಯಗೊಂಡಿದ್ದರು. ಕೇಂದ್ರ ಗೃಹಸಚಿವಾಲಯದ ಆದೇಶದ ನಂತರ NIA ಕಳೆದ ವಾರ ಪ್ರಕರಣವನ್ನು ವಹಿಸಿಕೊಂಡಿದೆ.

ಪ್ರಕರಣದಲ್ಲಿ ಆತನನ್ನು ಇನ್ನೂ ವಿಚಾರಣೆ ನಡೆಸಲಾಗುತ್ತಿದೆ. ಸಿಸಿಟಿವಿಯಲ್ಲಿ ಸಿಕ್ಕಿಬಿದ್ದಿರುವ ವ್ಯಕ್ತಿಯೇ ಈತನೇ ಎಂಬುದು ಇನ್ನೂ NIA ಖಚಿತಪಡಿಸಿಲ್ಲ

Leave a Reply

Your email address will not be published. Required fields are marked *

error: Content is protected !!