ಮಾರ್ಚ್ 6 ರಂದು ನಗರಕ್ಕೆ ರಣದೀಪ್ ಸಿಂಗ್ ಸುರ್ಚಿವಾಲಾ.
ದಾವಣಗೆರೆ :ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಉಸ್ತುವಾರಿಗಳಾದ ಶ್ರೀ ರಣದೀಪ್ ಸಿಂಗ್ ಸುರ್ಜಿವಾಲಾ, ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ಹಾಗೂ ಕೆಪಿಸಿಸಿ ಕಾರ್ಯದಕ್ಷರಾದ ಸಲೀಂ ಅಹಮದ್ ರವರು ದಿನಾಂಕ 06-03 2023ನೇ ಸೋಮವಾರ ಮಧ್ಯಾಹ್ನ 2 ಗಂಟೆಗೆ ಪಕ್ಷದ ಮುಖಂಡರು ಹಾಗೂ ಚುನಾವಣಾ ಆಕಾಂಕ್ಷಿಗಳ ಸಭೆಯನ್ನು ನಗರದ ಎಂಬಿಎ ಆಡಿಟೋರಿಯಂ ನಲ್ಲಿ ನಡೆಸಲಿದ್ದು, ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಎಚ್.ಬಿ ಮಂಜಪ್ಪನವರ ವಹಿಸಿಕೊಳ್ಳಲಿದ್ದಾರೆ ಸಭೆಯಲ್ಲಿ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ನವರು, ಮಾಜಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ರವರು ಉಪಸ್ಥಿತರಿರುವರು.
ಈ ಸಭೆಗೆ ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ವಿಧಾನ ಪರಿಷತ್ ಸದಸ್ಯರು, ಪಕ್ಷದ ಕೆಪಿಸಿಸಿ ಜಿಲ್ಲಾ ಉಸ್ತುವಾರಿಗಳು, ಕೋ ಅರ್ಡಿನೇಟರ್ ಗಳು, ಪಕ್ಷದ ಚುನಾವಣಾ ಆಕಾಂಕ್ಷಿಗಳು, ಪಕ್ಷದ ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಸಮಿತಿ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು, ಪದಾಧಿಕಾರಿಗಳು, ಪಂಚಾಯತ್, ವಾರ್ಡ್ ಅಧ್ಯಕ್ಷರು, ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಪಾಲಿಕೆ ಸದಸ್ಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ ಕೋರಿದ್ದಾರೆ.