ಅಪ್ರಾಪ್ತ ಬಾಲಕಿಯ ಅತ್ಯಾಚಾರ, 10 ವರ್ಷ ಕಠಿಣ ಶಿಕ್ಷೆ
ದಾವಣಗೆರೆ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಅತ್ಯಾಚಾರ ಎಸಗಿದ ಆರೋಪಿಗೆ ದಾವಣಗೆರೆಯ ವಿಶೇಷ ಪೋಕ್ಸೋ ನ್ಯಾಯಾಲಯವು 10 ವರ್ಷ ಕಠಿಣ ಶಿಕ್ಷೆ ಹಾಗೂ 37ಸಾವಿರ ರೂ.ಗಳ ದಂಡಾದೇಶ ಹೊರಡಿಸಿ ತೀರ್ಪು ನೀಡಿದೆ. ಅಲ್ಲದೇ ಸಂತ್ರಸ್ಥೆಗೆ ಪರಿಹಾರ ರೂಪದಲ್ಲಿ 4.50 ಲಕ್ಷ ನೀಡುವಂತೆ ಜಿಲ್ಲಾ ಉಚಿತ ಸೇವಾ ಪ್ರಾಧಿಕಾರ ನೀಡುವಂತೆ ಆದೇಶಿಸಿದೆ.
ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದ ಹಾಲೇಶ್ ಅಲಿಯಾಸ್ ಹಾಲಸ್ವಾಮಿ ಶಿಕ್ಷೆಗೆ ಒಳಗಾದ ಆರೋಪಿ. ಈಲ್ಲಾ ಮತ್ತು ಸತ್ರ ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರಾದ ಎನ್.ಶ್ರೀಪಾದ್ ಅವರು, ಆರೋಪಿತನ ಮೇಲೆ ಸಾಕ್ಷ್ಯಾಧಾರಗಳು, ಸುಧೀಘ ವಿಚಾರಣೆಯ ಬಳಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಪೋಕ್ಸೋ ನ್ಯಾಯಾಲಯದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ ರೇಖಾ ಎಸ್.ಕೋಟೆಗೌಡರ್ ವಾದ ಮಂಡಿಸಿದ್ದರು. ಅಂದಿನ ತನಿಖಾಧಿಕಾರಿ ಬ್ರಿಜೇಷ್ ಮೆಹತಾ ಹೊನ್ನಾಳಿ ಠಾಣೆಯ ತನಿಖಾಧಿಕಾರಿಯಾಗಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಕಳೆದ 2019ರಲ್ಲಿ ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದ ವಾಸಿಯಾಗಿದ್ದ 17ವರ್ಷದ ಅಪ್ರಾಪ್ರ ಬಾಲಕಿಯನ್ನು ಪರಿಚಯ ಮಾಡಿಕೊಂಡು ರಾತ್ರಿ ವೇಳೆ ಕಾರಿನಲ್ಲಿ ಅಪಹರಿಸಿ ನಿನ್ನನ್ನು ಪ್ರೀತಿಸುತ್ತೇನೆ ಎಂದು ಪುಸಲಾಯಿಸಿ, ಮದುವೆ ಆಗುವುದಾಗಿ ನಂಬಿಸಿ ತೀರ್ಥಹಳ್ಳಿಗೆ ಕರೆದುಕೊಂಡು ಹೋಗಿ ಅಲ್ಲಿಂದ ಉಡುಪಿ ಸಮೀಪದ ಸಾಲಿಗ್ರಾಮದ ತನ್ನ ಸ್ನೇಹಿತನ ಮನೆಗೆ ಕರೆದುಕೊಂಡು ಹೋಗಿದ್ದ ಆರೋಪಿಯು ಅಪ್ರಾಪ್ತ ಬಾಲಕಿಯ ಇಚ್ಛೆಗೆ ವಿರುದ್ದ ಅತ್ಯಾಚಾರ ಎಸಗಿದ್ದ. ಈ ಕುರಿತಂತೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ, ನ್ಯಾಯಾಲಯದಲ್ಲಿ ವಿಚಾರಣೆ ನಂತರ ಆರೋಪಿತನ ವಿರುದ್ದ ಅತ್ಯಾಚಾರದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ತೀರ್ಪು ನೀಡಲಾಗಿದೆ ಎಂದು ವಿಶೇಷ ಸರ್ಕಾರಿ ಅಭಿಯೋಕರಾದ ರೇಖಾ ಎಸ್.ಕೋಟೆಗೌಡರ್ ತಿಳಿಸಿದ್ದಾರೆ.