ಏಪ್ರಿಲ್ 12 ರಂದು ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಏಪ್ರಿಲ್ 12 ರಂದು ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ದಾವಣಗೆರೆ :ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಏಪ್ರಿಲ್ 12 ರಂದು ಹರಿಹರ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಕುಂದುಕೊರತೆ ಹಾಗೂ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರ ನೇತೃತ್ವದಲ್ಲಿ ಏಪ್ರಿಲ್ 12 ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.00 ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಸಾರ್ವಜನಿಕರು ತಮ್ಮ ದೂರು ಹಾಗೂ ಅಹವಾಲುಗಳನ್ನು ಸಲ್ಲಿಸಬಹುದು. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದ್ದರೆ ಅಂತಹ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್.ಕೌಲಾಪೂರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!