ಭದ್ರಾದಿಂದ ತುಂಗಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ : ಎಚ್ಚರಿಕೆಯಿಂದ ಇರಲು ಸೂಚನೆ

ಭದ್ರಾದಿಂದ ತುಂಗಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ : ಎಚ್ಚರಿಕೆಯಿಂದ ಇರಲು ಸೂಚನೆ

ಶಿವಮೊಗ್ಗ : ಹಾವೇರಿ ನಗರಕ್ಕೆ ಕುಡಿಯುವ ನೀರು ಒದಗಿಸುವುದಕ್ಕಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡುವ ಕಾರಣ ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು, ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ.
ಹಾವೇರಿ ಜಿಲ್ಲೆ, ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗಲ್ಲದೇ ನದಿ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಏ.27 ರ ಸಂಜೆ 06 ರಿಂದ ಮೇ.09 ರ ಬೆಳಗ್ಗೆ 06 ಗಂಟೆಯವರೆಗೆ ಪ್ರತಿ ದಿನ 1000 ಕ್ಯೂಸೆಕ್ಸ್‍ನಂತೆ ಒಟ್ಟು 11574 ಕ್ಯೂಸೆಕ್ಸ್ ಪ್ರಮಾಣದ ನೀರನ್ನು ಭದ್ರಾ ನದಿಗೆ ಹರಿಸಲಾಗುವುದು. ಆದ್ದರಿಂದ ನದಿ ಪಾತ್ರದಲ್ಲಿ ಪ್ರಗಗತಿಯಲ್ಲಿರುವ ಕಾಮಗಾರಿಗಳನ್ನು, ಸಾರ್ವಜನಿಕರು ಮತ್ತು ರೈತರು ತಿರುಗಾಡುವುದನ್ನು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಹಾಗೂ ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು, ಅನಧಿಕೃತವಾಗಿ ನೀರೆತ್ತುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರಾದ ಎನ್. ಸುಜಾತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!