Child labour; ಬಾಲ ಕಾರ್ಮಿಕ ಪದ್ಧತಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಂತೋಷ್‌ ಲಾಡ್ ಎಚ್ಚರಿಕೆ

ಧಾರವಾಡ, ಅ. 12: ಜಿಲ್ಲೆಯಲ್ಲಿ ಬಾಲ ಕಾರ್ಮಿಕರನ್ನು (Child labour) ನೇಮಿಸಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಧಾರವಾಡದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವರು, ಗ್ಯಾರೇಜ್, ಪೆಟ್ರೋಲ್ ಬಂಕ್, ಅಂಗಡಿ ಮುಂಗಟ್ಟು ಹಾಗೂ ಹೋಟೆಲ್‌ಗಳ ಮಾಲೀಕರು ಮಕ್ಕಳನ್ನು ಯಾವುದೇ ಕಾರಣಕ್ಕೂ ಕೆಲಸಕ್ಕೆ ನಿಯೋಜಿಸಿಕೊಳ್ಳದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಎಲ್ಲಾದರೂ ಬಾಲ ಕಾರ್ಮಿಕರು ಕಂಡು ಬಂದರೆ ಸ್ವಯಂ ದೂರು ನೀಡಬೇಕು. ಉಚಿತ ದೂರವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು. ಅಧಿಕಾರಿಗಳು ಎಲ್ಲಾ ಅಂಗಡಿ ಮುಂಗಟ್ಟು, ಕಾರ್ಖಾನೆ ಇನ್ನಿತರ ಕಡೆಗಳಲ್ಲಿ ಬಾಲ ಕಾರ್ಮಿಕ ನಿಷೇಧದ ಬಗ್ಗೆ ನಾಮಫಲಕಗಳನ್ನು ತಪ್ಪದೇ ಹಾಕಬೇಕೆಂದು ಸೂಚಿಸಿದರು.

congress; ಸಚಿವ ಎಸ್.ಎಸ್.ಮಲ್ಲಿಕಾರ್ಜುನರ ಸಂಪರ್ಕಿಸಲು ಪ್ರಯತ್ನ ಪಟ್ಟರೂ ನನಗೆ ಸಿಗಲಿಲ್ಲ: ಜಿ.ಬಿ.ವಿನಯ್‌ಕುಮಾರ್

ಬಾಲ ಕಾರ್ಮಿಕರ ರಕ್ಷಣೆಗೆ ಟಾಸ್ಕಪೋರ್ಸ್

ಜಿಲ್ಲೆಯಲ್ಲಿ ಬಾಲ ಕಾರ್ಮಿಕರ ರಕ್ಷಣೆಗೆ ಕಾರ್ಮಿಕ ಹಾಗೂ ಪೊಲೀಸ್‌ ಇಲಾಖೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಬೇಕು. ಬಾಲ ಕಾರ್ಮಿಕರು ಕಾಣಬಂದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಟಾಸ್ಕಪೋರ್ಸ್‌ ರಚನೆ ಮಾಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಕ್ರಮ ಚಟುವಟಿಕೆಗಳಿಗೆ ತಡೆವೊಡ್ಡಿ

ಮಕ್ಕಳ ಅಕ್ರಮ ಕಳ್ಳ ಸಾಗಾಣಿಕೆ, ಡ್ರಗ್ಸ್‌, ಕ್ರಿಕೆಟ್‌ ಬೆಟ್ಟಿಂಗ್‌ ಸೇರಿದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲಾ ಅಕ್ರಮ ಚಟುವಟಿಕೆಗಳಿಗೆ ತಡೆವೊಡ್ಡಬೇಕೆಂದು ಸಚಿವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲೆಯಲ್ಲಿ ಚಿಕ್ಕ ಮಕ್ಕಳನ್ನು ಭಿಕ್ಷಾಟನೆಗೆ ದೂಡುವ ಮಾಫಿಯಾ ಇದೀಗ ಬೆಂಗಳೂರು, ಮುಂಬೈನಿಂದ ಹುಬ್ಬಳ್ಳಿ-ಧಾರವಾಡಕ್ಕೂ ಕಾಲಿಡುತ್ತಿದೆ. ಕಾಲೇಜುಗಳಲ್ಲಿ ಡ್ರಗ್ಸ್‌ ಮಾರಾಟವಾಗುತ್ತಿದೆ. ಕ್ರಿಕೆಟ್‌ ಬೆಟ್ಟಿಂಗ್‌ ಜೋರಾಗಿದೆ. ಇಷ್ಟೆಲ್ಲ ನಡೆಯುತ್ತಿದ್ದರೂ ಅಧಿಕಾರಿಗಳು ನಿದ್ರೆ ಮಾಡುತ್ತಿದ್ದೀರಾ? ಎಂದು ಪ್ರಶ್ನಿಸಿದ ಅವರು, ಇನ್ನು ಮೂರು ತಿಂಗಳು ಕಾಲಾವಕಾಶ ಕೊಡುತ್ತೇನೆ. ಜಿಲ್ಲೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ನಡೆದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಇದೇ ವೇಳೆ ಸಚಿವರು ಎಚ್ಚರಿಕೆ ನೀಡಿದರು.

youth death; ಕೇಸರಿ ಬಾವುಟ ಕಟ್ಟಲು ಹೋಗಿ ಕೆಳಗಿ ಬಿದ್ದು ಸಾವು

ರಾಜ್ಯದಲ್ಲೇ ಧಾರವಾಡವನ್ನು ನಂಬರ್‌ ಒನ್ ಮಾಡೋಣ

ಇಡೀ ರಾಜ್ಯದಲ್ಲೇ ಧಾರವಾಡ ಜಿಲ್ಲೆಯನ್ನು ನಂಬರ್‌ ಒನ್‌ ಉತ್ತಮ ಆಡಳಿತದ ಜಿಲ್ಲೆಯನ್ನಾಗಿ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅಧಿಕಾರಿಗಳಿಗೆ ಹೇಳಿದರು.

ಸೇವೆಗಾಗಿ ಜನರು ನಮಗೆ ನೀಡಿರುವ ಇದೊಂದು ಸದಾವಕಾಶ ಎಂದುಕೊಂಡು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಈವರೆಗೂ ನಿಮ್ಮೊಂದಿಗೆ ನಾನು ಅತ್ಯಂತ ಗೌರವಯುತವಾಗಿ ಸ್ನೇಹದಿಂದ ನಡೆದುಕೊಂಡಿದ್ದೇನೆ. ಅಧಿಕಾರಿಗಳು ಕೆಲಸ ಮಾಡದೆ ಹೋದರೆ ಇನ್ನು ಮುಂದೆ ಸಹಿಸಲಾಗದು. ಕೂಡಲೇ ಎಚ್ಚೆತ್ತುಕೊಳ್ಳಿ ಎಂದ ಅವರು, ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಬಗೆಹರಿಸುವಂತೆ ಸಚಿವರು ಸೂಚಿಸಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!