ಯಡಿಯೂರಪ್ಪಗೆ ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ

ಯಡಿಯೂರಪ್ಪಗೆ ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ

ಬಾಳೆಹೊನ್ನೂರು :  ಬಾಳೆಹೊನ್ನೂರಿನ ರಂಭಾಪುರಿ ಮಠದ ಆವರಣದಲ್ಲಿ ಏರ್ಪಡಿಸಿದ್ದ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರಿಗೆ ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಭಾನುವಾರ ಬಾಳೆಹೊನ್ನೂರಿನ ರಂಭಾಪುರಿ ಮಠದ ಆವರಣದಲ್ಲಿ ಏರ್ಪಡಿಸಿದ್ದ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ವೀರಭದ್ರಸ್ವಾಮಿ ರಥೋತ್ಸವ, ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಸಮಾರಂಭ, ಶಿವಾದ್ವೈತ ಧರ್ಮ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಪುರಸ್ಕಾರವು ಒಂದು ಲಕ್ಷ ರೂಪಾಯಿ ನಗದು, ಸ್ಮರಣಿಕೆ, ಫಲಕ ಒಳಗೊಂಡಿದೆ.

ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಬೆಂಗಳೂರಿನ ಮುಕ್ತಿಮಂದಿರದ ಅಧ್ಯಕ್ಷ ವಿಮಲ ರೇಣುಕ ವೀರಮುಕ್ತಿ ಸ್ವಾಮೀಜಿ,  ಹಂಪಸಾಗರದ ನವಲಿ ಹಿರೇಮಠದ ಶಿವಲಿಂಗ ರುದ್ರಮುನಿ ಸ್ವಾಮೀಜಿ, ಬಾಳೆಹೊನ್ನೂರಿನ ಜುಕ್ತಿ ಹಿರೇಮಠದ ಕೊಟ್ಟೂರು ಬಸವೇಶ್ವರ ಸ್ವಾಮೀಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಶಾಸಕ ಸಿ.ಟಿ.ರವಿ, ಡಿ.ಎಸ್.ಸುರೇಶ್, ಎಂ.ಪಿ.ಕುಮಾರಸ್ವಾಮಿ ಇತರರು ಈ ಸಂದರ್ಭದಲ್ಲಿದ್ದರು.

Leave a Reply

Your email address will not be published. Required fields are marked *

error: Content is protected !!