ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣ

ದಾವಣಗೆರೆ: ಭಾರತ ದೇಶದ 73 ನೇ ಗಣತಂತ್ರ ಅಂಗವಾಗಿ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎ.ಬಸವರಾಜ(ಬೈರತಿ) ಅವರು ದಿನಾಂಕ 26-1-2022 ರಂದು ಬೆಳಿಗ್ಗೆ ರಾಷ್ಟ್ರದ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಗಣರಾಜ್ಯೋತ್ಸವ ಆಚರಣೆಗೆ ಚಾಲನೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕರಾದ ಶ್ರೀ ಎಸ್. ಎ.ರವೀಂದ್ರನಾಥ ವಹಿಸಿದ್ದರು. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಪೂಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್, ಜಿಲ್ಲಾ ಪಂಚಾಯತ ಸಿಇಒ, ಮಹಾನಗರ ಪಾಲಿಕೆ ಪೌರರು, ಉಪಪೌರರು,ಅಯುಕ್ತರು ಸೇರಿದಂತೆ ಜಿಲ್ಲೆಯ ಹಲ ಜನಪ್ರತಿನಿಧಿಗಳು, ದೇಶಾಭಿಮಾನಿಗಳು ಉಪಸ್ಥಿತರಿದ್ದರು.