ಪಿಎಸ್‌ಐ ಅಕ್ರಮ ನೇಮಕ: ಪಾಟೀಲ, ದಿವ್ಯಾ ಹಾಗರಗಿ ನಿವಾಸದ ಮೇಲೆ ಇಡಿ ದಾಳಿ

ಕಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದ ಪ್ರಮುಖ ಆರೋಪಿಗಳಾದ ಆರ್.ಡಿ.ಪಾಟೀಲ, ದಿವ್ಯಾ ಹಾಗರಗಿ ಸೇರಿ ಐವರು ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳು ದಾಳಿ ಮಾಡಿ, ದಾಖಲೆಗಳು ಪರಿಶೀಲಿಸಿದ್ದಾರೆ.
ಗುರುವಾರ ಬೆಳಿಗ್ಗೆ ಎರಡು ತಂಡಗಳಲ್ಲಿ ಬಂದ ಅಧಿಕಾರಿಗಳು ಆರ್.ಡಿ.ಪಾಟೀಲ, ಮಹಾಂತೇಶ ಪಾಟೀಲ, ದಿವ್ಯಾ ಹಾಗರಗಿ, ಮಂಜುನಾಥ ಮೇಳಕುಂದಿ ಮತ್ತು ಕಾಶಿನಾಥ ಚಿಲ್ಲಾ ಅವರ ಮನೆಗಳ ಮೇಲೆ ದಾಳಿ ನಡೆಸಿದರು. ದಾಖಲೆಗಳ ಪರಿಶೀಲನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಅಧಿಕಾರಿಗಳು ನೆರೆಯ ತೆಲಂಗಾಣ ರಾಜ್ಯದ ನಾಮಫಲಕ ಹೊಂದಿದ ವಾಹನಗಳಲ್ಲಿ ಬಂದಿದ್ದರು. ಪಿಎಸ್ಐ ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅಭ್ಯರ್ಥಿಗಳಿಂದ ಪಡೆದ ಹಣದ ದಾಖಲೆಗಳು, ಇತರೆ ಮಾಹಿತಿ ಕಲೆ ಹಾಕಿ ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!