ಮಾರ್ಚ್ 12 ರಂದು ವಸತಿ ಶಾಲೆಗಳ ಪ್ರವೇಶ ಪರೀಕ್ಷೆ:13 ಪರೀಕ್ಷಾ ಕೇಂದ್ರ ನೋಂದಣಿ 5450 ವಿದ್ಯಾರ್ಥಿಗಳಿಗೆ ನಕಲು ಮುಕ್ತ ಪರೀಕ್ಷೆಗೆ ಸೂಚನೆ

ವಸತಿ ಶಾಲೆಗಳ ಪ್ರವೇಶ ಪರೀಕ್ಷೆ
ದಾವಣಗೆರೆ :ಮಾರ್ಚ್ 12 ರಂದು ಜಿಲ್ಲೆಯ 13 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಯನ್ನು ನಕಲು ಮುಕ್ತ ಹಾಗೂ ವ್ಯವಸ್ಥಿತವಾಗಿ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಪಿಎನ್ ಲೋಕೇಶ್ ಸೂಚನೆ ನೀಡಿದ್ದಾರೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗೆ ಸಿದ್ಧತೆ ಕೈಗೊಳ್ಳುವ ಸಂಬಂಧ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು
ಜಿಲ್ಲೆಯಲ್ಲಿ ಒಟ್ಟು 5450 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಡೆಸಲು ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷೆಯನ್ನು ಸುಗಮವಾಗಿ ನಡೆಸಲು ದಾವಣಗೆರೆ, ಚನ್ನಗಿರಿ, ತಾಲ್ಲೂಕು ಕೇಂದ್ರಗಳಲ್ಲಿ ತಲಾ 2 ರಂತೆ ಮತ್ತು ಹೊನ್ನಾಳಿ ಜಗಳೂರು ಹರಿಹರ ಹೊನ್ನಾಳಿ, ಕೇಂದ್ರಗಳಲ್ಲಿ ತಲಾ 3 ರಂತೆ ಒಟ್ಟು 13 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದರು.
ಮಾರ್ಚ್ 12 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪ್ರವೇಶ ಪರೀಕ್ಷೆ ಜರುಗಲಿದ್ದು, ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಕಟ್ಟುನಿಟ್ಟಾಗಿ ನಿಯಮಗಳಲ್ಲಿ ಪಾಲಿಸಬೇಕು’ ಎಂದು ಹೇಳಿದರು.
ನಿಷೇಧ : ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳು ಕೊಠಡಿ ಮೇಲ್ವೆಚಾರ ಸಿಬ್ಬಂದಿಗಳು ಮೊಬೈಲ್ ಪೋನ್/ಇತರೆ ವಿದ್ಯುನ್ಮಾನ ಆಧುನಿಕ ಉಪಕರಣಗಳ ಬಳಕೆ ನಿಷೇಧಿಸಿದೆ. ಕೊಠಡಿ ಒಳಗೆ ಯಾರು ವಿದ್ಯುನ್ಮಾನ ಉಪಕರಣಗಳನ್ನು ತೆಗೆದುಕೊಂಡು ಹೋಗುವಂತಿಲ್ಲ ಹಾಗೂ ಪರೀಕ್ಷಾ ಕೇಂದ್ರ ಆವರಣದಲ್ಲಿ ಅನಾವಶ್ಯಕ ಓಡಾಟ ಪರೀಕ್ಷೆ ಕಾರ್ಯಕ್ಕೆ ಸಂಬಂಧಿಸಿದೆ ಇರುವ ವ್ಯಕ್ತಿಗಳ ಪ್ರವೇಶಕ್ಕೆ ನಿಷೇಧವಿದೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ಸೂಚನೆ ನೀಡಿದರು. ಹಾಗೂ ಪರೀಕ್ಷ ಕೇಂದ್ರ ಸುತ್ತಲು ಸೆಕ್ಷನ್ 144 ರನ್ವಯ ನಿಷೇಧಜ್ಞೆ ಘೋಷಿಸಲಾಗುವುದು. ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಿವರಾಜ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಕೆ ಮಲ್ಲನಾಯ್ಕ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಾಗರಾಜ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.