ದಾವಣಗೆರೆ ವಿವಿ ಅತಿಥಿ ಉಪನ್ಯಾಸಕರ ಮನವಿಗೆ ಸ್ಪಂದಿಸಿದ ಡಾ. ಪ್ರಭಾ ಮಲ್ಲಿಕಾರ್ಜುನ
ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ ಅತಿಥಿ ಉಪನ್ಯಾಸಕರು ಇಂದು ಡಾ. ಪ್ರಭಾ ಮಲ್ಲಿಕಾರ್ಜುನ್ ರವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ತಾವು ಅತಿಥಿ ಶಿಕ್ಷಕರಾಗಿ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಅನುಭವಿಸುತ್ತಿರುವ ಸಮಸ್ಯೆಗಳು ಹಾಗೂ ಸರ್ಕಾರದ ನೀತಿಗಳನ್ನು ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಸರಿಯಾಗಿ ಅನುಸರಿಸುತ್ತಿಲ್ಲ ಎನ್ನುವುದರ ಬಗ್ಗೆ ಮಾಹಿತಿ ನೀಡಿ ಸಮಸ್ಯೆ ಬಗೆಹರಿಸಲು ಮನವಿ ಮಾಡಿದರು, ಈ ಸಂದರ್ಭದಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್ ರವರು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ ಸಚಿವರ ಗಮನಕ್ಕೆ ತಂದು ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.