ಮಾ.1ರ ಸರ್ಕಾರಿ ನೌಕರರ ಮುಷ್ಕರಕ್ಕೆ ಕಂದಾಯ ಇಲಾಖಾ ನೌಕರರ ಸಂಘ ಬೆಂಬಲ – ಸಿದ್ದೇಶ್ ಜಿ ಎಸ್
ದಾವಣಗೆರೆ: ಇದೇ ಮಾ.1ರಿಂದ ಸರ್ಕಾರಿ ನೌಕರರು ಅನಿರ್ದಿಷ್ಟ ಕಾಲ ಮುಷ್ಕರ ನಡೆಸಲು ಸಿದ್ಧವಾಗಿದ್ದಾರೆ.
ಎಲ್ಲಾ ಇಲಾಖೆಯ ಅಧಿಕಾರಿ, ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಷ್ಕರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖಾ ನೌಕರರ ಸಂಘ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.
ಜಿಲ್ಲೆಯ ಸಮಸ್ತ ಕಂದಾಯ ಇಲಾಖೆ ವ್ಯಾಪ್ತಿಗೊಳಪಡುವ ಜಿಲ್ಲಾಧಿಕಾರಿ ಕಚೇರಿ, ಉಪ ವಿಭಾಗಾಧಿಕಾರಿಗಳಕಚೇರಿ, ತಾಲ್ಲೂಕಿನ ತಹಶೀಲ್ದಾರ್, ನಾಡಕಚೇರಿ ವ್ಯಾಪ್ತಿಯ ಎಲ್ಲಾ ಸಿಬ್ಬಂದಿಗಳು, ಗ್ರಾಮಸಾಯಕರು, ಹೊರ ಗುತ್ತಿಗೆ ಡಾಟಾ ಎಂಟ್ರಿ ಆಪರೇಟರ್‌ಗಳು, ಕಚೇರಿ ಕಾರ್ಯನಿರ್ವಾಹಕ ಸಿಬ್ಬಂದಿಗಳು ಬುಧವಾರ ಗೈರು ಹಾಜರಾಗಿ ಮುಷ್ಕರದಲ್ಲಿ ಭಾಗವಹಿಸುವಂತೆ ಸಂಘದ ಅಧ್ಯಕ್ಷ ಸಿದ್ದೇಶ್ ಜಿ.ಎಸ್., ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಕೆ.ಎನ್. ಕರೆ ನೀಡಿದ್ದಾರೆ.