Revenue Officers Control: ಕಂದಾಯ ಇಲಾಖೆ ಅಧಿಕಾರಿಗಳಿಗೆ ಸರ್ಕಾರದಿಂದ ಮತ್ತೊಂದು ಮೂಗುದಾರ

ದವಣಗೆರೆ: ಇನ್ನುಮುಂದೆ ಜನಪ್ರತಿನಿಧಿಗಳ ಮತ್ತು ಸಾರ್ವಜನಿಕರ ಕರೆ ಸ್ವೀಕರಿಸದೆ ನಿರ್ಲಕ್ಷ್ಯ ವಹಿಸುವ ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಸರ್ಕಾರ ಶಿಸ್ತುಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಜೊತೆ ನಿಕಟ ಸಂಪರ್ಕ ಹೊಂದಿರುವ ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಗ್ರಾಮಲೆಕ್ಕಿಗರಿಂದ ರಾಜಸ್ವ ನಿರೀಕ್ಷಕರು, ಉಪ ತಹಶೀಲ್ದಾರ್, ತಹಶೀಲ್ದಾರ್, ಉಪ ವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ನೇರವಾಗಿ ಜನರ ಹಾಗೂ ಜನಪ್ರತಿನಿಧಿಗಳ ಸಂರ್ಪದಲ್ಲಿರಬೇಕು. ಮುಖ್ಯವಾಗಿ ಜನರ ಅಹವಾಲುಗಳನ್ನು ಇತ್ಯರ್ಥ ಪಡಿಸುವ ಕೆಲಸ ಮಾಡಬೇಕು. ಒಂದು ವೇಳೆ ಕರೆಗಳನ್ನು ಸಕಾಲದಲ್ಲಿ ಸ್ವೀಕರಿಸಲು ಸಾಧ್ಯವಾಗದೇ ಇದ್ದರೆ ಸಾರ್ವಜನಿಕರಿಗೆ ತಲುಪಿಸುವ ಸೇವೆಗಳಲ್ಲಿ ಏರು- ಪೇರು ಉಂಟಾಗುವ ಸಾಧ್ಯತೆ ಹೆಚ್ಚಿರುವುದರಿಂದ ಮರು ಕರೆ ಮಾಡಿ ಅಹವಾಲಿಗೆ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಸಾರ್ವಜನಿಕರು ಮತ್ತು‌ ಜನಪ್ರತಿನಿಧಿಗಳೊಂದಿಗೆ ಹೆಚ್ಚಾಗಿ ಒಡನಾಟ ಹೊಂದಿರುವುದು ತಹಶೀಲ್ದಾರ್ ಗಳು ಸಾರ್ವಜನಿಕರು ಹಾಗೂ ಜನಪ್ರತಿನಧಿಗಳ ದೂರವಾಣಿ ಕರೆಗಳನ್ನು ತಹಶೀಲ್ದಾರರುಗಳು ಸ್ವೀಕರಿಸದಿರುವ ವಿಷಯ ಸರ್ಕಾರದ ಗಮನಕ್ಕೆ ಬಂದಿದ್ದು, ಆದ್ದರಿಂದ ಇನ್ನು ಮುಂದೆ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ಕರೆ ಬಂದಲ್ಲಿ ಅಧಿಕೃತವಾಗಿ ಕರೆಗಳನ್ನು ಸ್ವೀಕರಿಸಿ ಸದರಿ ಅಹವಾಲು ಮನವಿಗಳಿಗೆ ಹೆಚ್ಚು ಗಮನ ನೀಡಿ ಕಾನೂನಿನ ವ್ಯಾಪ್ತಿಯಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.

ಜನಪ್ರತಿನಿಧಿಗಳಿಗೆ, ಸಾರ್ವಜನಿಕರಿಗೆ ಅಗೌರವ ತೋರಿರುವುದು ಕಂಡುಬಂದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಜರುಗಿಸುವ ಜತೆಗೆ ಹಕ್ಕುಚ್ಯುತಿ ಉಂಟಾಗುವ ಸಾಧ್ಯತೆ ಇರುವುದರಿಂದ ಇದಕ್ಕೆ ಅವಕಾಶ ನೀಡದಂತೆ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!