ಭೂ ಮಾಪಕರ ಆಯ್ಕೆಗೆ ಆರ್ಜಿ ಆಹ್ವಾನ: 2000 ಹುದ್ದೆಗಳು ಭರ್ತಿ
ಬೆಂಗಳೂರು: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಿಂದ ಭೂಮಾಪಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು, ಆನ್‌ಲೈನ್ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಫೆಬ್ರವರಿ 20, 2023
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅಭ್ಯರ್ಥಿಗಳು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು ಅಭ್ಯರ್ಥಿಗಳು ರೂ. 1000 ಅರ್ಜಿ ಶುಲ್ಕ ಪಾವತಿಸಬೇಕಿದೆ. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದಾಗಿದೆ.