River Sand: ಹರಿಹರದ ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ: 50 ಸಾವಿರ ಮೌಲ್ಯದ 20 ಮೆಟ್ರಿಕ್ ಟನ್ ಮರಳು ವಶ

IMG-20250111-WA0010
ದಾವಣಗೆರೆ: (River Sand) ಅಕ್ರಮವಾಗಿ ತುಂಗಭದ್ರಾ ನದಿಯ ದಡದಲ್ಲಿ ಮರಳನ್ನು ಸಂಗ್ರಹಿಸಿದ ಅಡ್ಡೆ ಮೇಲೆ ಪೋಲಿಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಮರಳನ್ನು ವಶಪಡಿಸಿಕೊಂಡಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೇಬೆನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ತುಂಗಾಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ಪ್ರಾರಂಭಿಸಲಾಗಿದೆ. ಪೊಲೀಸ್ ಇಲಾಖೆ, ಸ್ಥಳೀಯ ಕಂದಾಯ ಇಲಾಖೆ,  ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಗಮನಕ್ಕೆ ಬಾರದೇ ಅಕ್ರಮ ಮರಳುಗಾರಿಕೆ ನಡೆಸುತ್ತಿರುವವರ ವಿರುದ್ದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಕಾರ್ಯಪಡೆ ಸಜ್ಜಾಗಿದೆ.
ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ತಡೆಗಟ್ಟಲು ದಾವಣಗೆರೆ ಎಸ್ ಪಿ ಉಮಾ ಪ್ರಶಾಂತ್, ಎ ಎಸ್ ಪಿ ವಿಜಯಕುಮಾರ್ ಎಂ. ಸಂತೋಷ, ಹಾಗೂ ಜಿ. ಮಂಜುನಾಥ,  ಗ್ರಾಮಾಂತರ ಉಪ ವಿಭಾಗದ ಡಿ ವೈ ಎಸ್ ಪಿ ಬಸವರಾಜ್ ಬಿ..ಎಸ್. ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ಮತ್ತು ಮಲೆಬೆನ್ನೂರು ಪಿ.ಎಸ್.ಐ ಪ್ರಭು ಡಿ. ಕೆಳಗಿನಮನಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.
ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋವಿನಹಾಳ್ ಗ್ರಾಮದ ಬಳಿಯ ಬೈರನಪಾದದ ಬಳಿಯ ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸಿದ್ದ ಅಪರಿಚತರು ಮರಳನ್ನು ಅಕ್ರಮವಾಗಿ ಸಂಗ್ರಹಿಸಿ ಸಾಗಣಿಕೆ
ಮಾಡಿ ಲಾಭ ಮಾಡಿಕೊಳ್ಳುವ ದುರುದ್ದೇಶದಿಂದ ಮರಳನ್ನು ಸಂಗ್ರಹಿಸಿಟ್ಟಿದ್ದರು.
ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ಅವರ ಮಾರ್ಗದರ್ಶನದಲ್ಲಿ ಮಲೇಬೆನ್ನೂರು ಪೊಲೀಸ್ ಠಾಣೆಯ ಪಿ.ಎಸ್.ಐ ಪ್ರಭು ಡಿ ಕೆಳಗಿನಮನಿ ಅವರನ್ನೊಳಗೊಂಡ ತಂಡವು ದಾಳಿ ಮಾಡಿ, ಸುಮಾರು ಅಂದಾಜು ಬೆಲೆ 50,000 ರೂ ಬೆಲೆಯ ಸುಮಾರು 20 ಮೆಟ್ರಿಕ್ ಟನ್ ಮರಳನ್ನು ವಶ ಪಡಿಸಿಕೊಂಡಿದೆ. ಈ ಬಗ್ಗೆ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೋಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!