ರಸ್ತೆ ಅಪಘಾತದಲ್ಲಿ ಡಿಎಆರ್ ಪೊಲೀಸ್ ಸಿಬ್ಬಂದಿ ಸಾವು

ದಾವಣಗೆರೆ- ಹೊನ್ನಾಳಿ ಬಳಿ ಇಂದು ನಡೆದ ರಸ್ತೆ ಅಪಘಾತದಲ್ಲಿ ದಾವಣಗೆರೆ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಹೆಚ್.ಸಿದ್ದೇಶ್ ಮೃತಪಟ್ಟಿದ್ದಾರೆ.
ಕುಟುಂಬ ಸದಸ್ಯರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಅವರೊಂದಿಗೆ ಮಣಿಪಾಲ್ ಗೆ ಕಾರಿನಲ್ಲಿ ತೆರಳುತ್ತಿದ್ದಾಗ ಬೆಳಗಿನ ಜಾವ 5 ಗಂಟೆ ವೇಳೆಗೆ ಕಾರು ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಈ ಕುರಿತ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಅಪಘಾತದ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದು ಸಿದ್ದೇಶ್ ಮೃತಪಟ್ಟಿದ್ದಾರೆ. ಸಿದ್ದಶ್ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. 2012ನೇ ಬ್ಯಾಚ್ ನಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದರು. ಅವರಿಗೆ ಎರಡು ವರ್ಷದ ಅವಳಿ-ಜವಳಿ ಮಕ್ಕಳಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!