rain; ಮಳೆಗೆ ಜಲಾವೃತವಾದ ರಸ್ತೆಗಳು, ಆಡಳಿತದ ವಿರುದ್ಧ ಸಾರ್ವಜನಿಕರು ಕಿಡಿ

ಚನ್ನಗಿರಿ, ನ.07: ನಗರದಲ್ಲಿ ಸೋಮವಾರ ಸಂಜೆ ಸುರಿದ ‌ಮಳೆಗೆ (rain ) ವಾಹನಗಳು ಹಾಗೂ ತಾಲ್ಲೂಕು ಕಚೇರಿ ಮುಂಭಾಗದ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕು ಮುಂಭಾಗದ ರಸ್ತೆಯಲ್ಲಿ ಮಳೆ ನೀರು ಹೋಗಲು ಸರಿಯಾಗಿ ವ್ಯವಸ್ಥೆ ಇಲ್ಲದೆ ರಸ್ತೆಗಳು ಕೆರೆಯಂತಾಗಿದ್ದವು.

sheep death; ಸಿಡಿಲಿಗೆ ಮೂವತ್ತಕ್ಕೂ ಹೆಚ್ಚು ಕುರಿಗಳ ಬಲಿ

ಇದರಿಂದ ವಾಹನ ಸವಾರರು ರಸ್ತೆಗಳಲ್ಲಿ ಸಂಚರಿಸಲು ಪರದಾಡುವಂತಾಯಿತಲ್ಲದೇ ಬೈಕ್, ಕಾರುಗಳು ಸಹ ಜಲಾವೃತಗೊಂಡಿದ್ದವು. ಅಂಗಡಿಗಳಿಗೂ ನೀರು ನುಗ್ಗಿತ್ತು. ಹೀಗಾಗಿ ತಾಲ್ಲೂಕು ಆಡಳಿತದ ವಿರುದ್ಧ ಸಾರ್ವಜನಿಕರು ಕಿಡಿಕಾರಿದರು.

Leave a Reply

Your email address will not be published. Required fields are marked *

error: Content is protected !!