ಆರ್ ಎಸ್ ಎಸ್ ಬಗ್ಗೆ ಮಾತನಾಡಿದವರು ಸರ್ವನಾಶ ಆಗುತ್ತಾರೆ – ಹೆಚ್ ಡಿ ಕೆ ಭವಿಷ್ಯ ನುಡಿದ ರೇಣುಕಾಚಾರ್ಯ

ದಾವಣಗೆರೆ: ಆರ್ಎಸ್ಎಸ್ ಬಗ್ಗೆ ಮಾತನಾಡುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಒಬ್ಬ ಅರೆಹುಚ್ಚ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಎಸ್ಎಸ್ ಅದೊಂದು ನಿಸ್ವಾರ್ಥ ಸೇವೆ ಮಾಡುವ ವಿಶ್ವದ ಅತೀ ದೊಡ್ಡ ಸಂಸ್ಥೆ. ಅಂತಹ ಆರೆಸ್ಸೆಸ್ ಬಗ್ಗೆ ಮಾತನಾಡುವ ಕುಮಾರಸ್ವಾಮಿ ಒಬ್ಬ ಅರೆಹುಚ್ಚನೇ ಹೌದು ಎಂದು ಕಿಡಿಕಾರಿದರು.
ಆರ್ಎಸ್ಎಸ್ ಹಿಂದುತ್ವ, ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗುತ್ತಿದೆ. ಆರೆಸ್ಸೆಸ್ ಬಗ್ಗೆ ಮಾತನಾಡಿದವರು ಸರ್ವನಾಶ ಆಗುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆರ್ಎಸ್ಎಸ್ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ. ಅದರ ಸಿದ್ಧಾಂತಗಳನ್ನು ಪಾಲಿಸಿದಾಗ ಮಾತ್ರ ಅದರ ಮಹತ್ವ ತಿಳಿಯುತ್ತದೆ ಎಂದರು.