Rural Bank:ಗ್ರಾಮೀಣ ಬ್ಯಾಂಕ್ ಉದ್ಯೋಗಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿನ 11 ನೇ ವೇತನಕ್ಕೆ ಆಗ್ರಹಿಸಿ ಮುಷ್ಕರ

ದಾವಣಗೆರೆ: ಗ್ರಾಮೀಣ ಬ್ಯಾಂಕ್ ಉದ್ಯೋಗಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲದಾದ 11 ನೇ ವೇತನ ಒಪ್ಪಂದವನ್ನು ಯಥಾವತ್ತಾಗಿ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ, ಬ್ಯಾಂಕ್ ಉದ್ಯೋಗಿಗಳು ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಮುಂಭಾಗ ಮುಷ್ಕರ ನಡೆಸಿದರು.

ಅಖಿಲ ಭಾರತ ಗ್ರಾಮೀಣ ಬ್ಯಾಂಕ್ ಉದ್ಯೋಗಿಗಳ ಸಂಘಟನೆಯ ಕರೆಯ ಮೇರೆಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರ ಸಂಘ ಹಾಗೂ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಸಂಘದ ಜಿಲ್ಲಾ ಘಟಕದಿಂದ ಜಿಲ್ಲೆಯ ಎಲ್ಲಾ ಗ್ರಾಮೀಣ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ಪ್ರತಿಭಟನೆ ನಡೆಸಿ, ಪ್ರಾದೇಶಿಕ ಕಚೇರಿಯ ಸಹಾಯಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರ ತನ್ನ ಪಾಲಿನ ಬಂಡವಾಳವನ್ನು ಪ್ರವರ್ತಕ ಬ್ಯಾಂಕುಗಳಿಗೆ ವರ್ಗಾವಣೆ ಮಾಡುವುದನ್ನು ನಿಲ್ಲಿಸಬೇಕು, ದೇಶದಲ್ಲಿರುವ 43 ಗ್ರಾಮೀಣ ಬ್ಯಾಂಕುಗಳನ್ನು ಒಟ್ಟುಗೂಡಿಸಿ ರಾಷ್ಟಿçÃಯ ಗ್ರಾಮೀಣ ಬ್ಯಾಂಕ್ ಸ್ಥಾಪನೆ ಮಾಡಬೇಕು, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮಿತ್ರಾ ಕಮಿಟಿಯ ಶಿಫಾರಸ್ಸಿನಂತೆ ಗ್ರಾಮೀಣ ಬ್ಯಾಂಕುಗಳಲ್ಲಿ ಮಾನವ ಸಂಪನ್ಮೂಲ ವರದಿ ಅನುಷ್ಠಾನಗೊಳಿಸುವುದು, ದಿನಗೂಲಿ ನೌಕರರನ್ನು ಖಾಯಂಗೊಳಿಸವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಕೆ.ಹೆಚ್. ದಪ್ಪೇರ್, ವಿರುಪಾಕ್ಷಯ್ಯ ಸ್ವಾಮಿ, ಎಸ್. ನಾಗರಾಜ್, ನಾಗೇಶ್ವರಿ ನಾಯಿರಿ, ಜಿಲ್ಲಾ ಕಾರ್ಯದರ್ಶಿಗಳು ಎಮ್.ಟಿ. ರಫೀ, ಸುಭಾಷ್, ಕೇಂದ್ರ ಸಮಿತಿ ಸದಸ್ಯರಾದ ಎಸ್.ಎಸ್. ಮಧು, ಕೆ.ಪಿ.ಮಧುಸೂದನ್, ಸುನಿತಾ, ಈಶ್ವರಪ್ಪ ಮುಷ್ಕರದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!