ರಾಜಕೀಯಕ್ಕೆ ಎಸ್. ನಾರಾಯಣ್ ಎಂಟ್ರಿ : ಕೈ ಹಿಡಿದ ನಿರ್ದೇಶಕ

ಬೆಂಗಳೂರು: ಕನ್ನಡ ಚಿತ್ರರಂಗ ನಟ, ನಿರ್ದೇಶಕ, ನಿರ್ಮಾಪಕ ಎಸ್. ನಾರಾಯಣ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಎಸ್. ನಾರಾಯಣ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ವೇಳೆ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಕೂಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕನ್ನಡ ಚಿತ್ರರಂಗ ನಟ, ನಿರ್ದೇಶಕ, ನಿರ್ಮಾಪಕರಾಗಿ ಖ್ಯಾತಿ ಪಡೆದಿದ್ದ ಎಸ್. ನಾರಾಯಣ್ ಸದ್ಯ ರಾಜಕೀಯ ದತ್ತ ಮುಖ ಮಾಡಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!