ಎಸ್.ಎಸ್.-94: ಶುಭಾಶಯಗಳ ಮಹಾಪೂರ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು, ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಗಳೂ ಆದ ಡಾ|| ಶಾಮನೂರು ಶಿವಶಂಕರಪ್ಪನವರು ಇಂದಿಗೆ 93 ವರ್ಷಗಳನ್ನು ಪೂರೈಸಿ 94ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಕಡೆಗಳಿಂದ ಸಾರ್ವಜನಿಕರು, ಬಂಧುಗಳು, ಅಧಿಕಾರಿ ವರ್ಗದವರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಬಾಪೂಜಿ ವಿದ್ಯಾಸಂಸ್ಥೆಯ ನೌಕರರು ಆಗಮಿಸಿ ಶುಭ ಕೋರಿದರು.
ಇಂದು ಬೆಳಿಗ್ಗೆ ಡಾ|| ಶಾಮನೂರು ಶಿವಶಂಕರಪ್ಪನವರ ಮಕ್ಕಳಾದ ಎಸ್.ಎಸ್.ಬಕ್ಕೇಶ್, ಎಸ್.ಗಣೇಶ್, ಸುಧಾ ರಾಜೇಂದ್ರ ಪಾಟೀಲ್, ಮಂಜುಳಾ ಶಿವಶಂಕರ್, ಶೈಲಜಾ ಭಟ್ಟಾಚಾರ್ಯ ಮತ್ತು ಮೀನಾ ಪಾಟೀಲ್ ಹಾಗೂ ಸೊಸೆಯಂದಿರಾದ ಶ್ರೀಮತಿ ಪ್ರೀತಿ ಬಕ್ಕೇಶ್, ಶ್ರೀಮತಿ ರೇಖಾ ಗಣೇಶ್, ಡಾ|| ಪ್ರಭಾ ಮಲ್ಲಿಕಾರ್ಜುನ್ (ದಾವಣಗೆರೆ ಲೋಕಸಭಾ ಸದಸ್ಯರು) ಮತ್ತು ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಕೇಕ್ ಕತ್ತರಿಸುವ ಮೂಲಕ ಶುಭ ಹಾರೈಸಿದರು. ವಿದೇಶ ಪ್ರವಾಸದಲ್ಲಿರುವ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ದೂರವಾಣಿ ಮೂಲಕ ಶುಭ ಹಾರೈಸಿದರು.
ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಮನೆಗೆ ತಂಡೋಪತಂಡವಾಗಿ ಆಗಮಿಸಿದ ಸಾರ್ವಜನಿಕರು ಡಾ|| ಶಾಮನೂರು ಶಿವಶಂಕರಪ್ಪನವರಿಗೆ ಶುಭ ಹಾರೈಸಿದರು. ಮಹಾನಗರ ಪಾಲಿಕೆ ಮಾಜಿ ಸದಸ್ಯ ಎಸ್.ಬಸಪ್ಪನವರು 94 ಕೆ.ಜಿ.ಕೇಕ್ ಮಾಡಿಸುವ ಮೂಲಕ ಅಭಿಮಾನ ತೋರಿದರು.
ಶಾಸಕರುಗಳಾದ ಡಿ.ಜಿ.ಶಾಂತನಗೌಡ, ಕೆ.ಎಸ್.ಬಸವಂತಪ್ಪ, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಬಿ.ಮಂಜಪ್ಪ, ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್.ಕೆ.ಶೆಟ್ಟಿ, ಎಸ್.ಮಲ್ಲಿಕಾರ್ಜುನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಅನಿತಾಬಾಯಿ ಮಾಲತೇಶ್, ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರುಗಳು, ಮಹಾನಗರ ಪಾಲಿಕೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು ಆಗಮಿಸಿ ಡಾ|| ಶಾಮನೂರು ಶಿವಶಂಕರಪ್ಪನವರಿಗೆ ಶುಭ ಕೋರಿದರು.
ಅಖಿಲ ಭಾರತ ವೀರಶೈವ ಮಹಾಸಭಾದ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ರೇಣುಕ ಪ್ರಸನ್ನ, ಗುರುಮೂರ್ತಿ ಸೇರಿದಂತೆ ಮಹಾಸಭಾದ ಅನೇಕ ಪದಾಧಿಕಾರಿಗಳು, ಸಮಾಜ ಬಾಂಧವರು ಆಗಮಿಸಿ ಶುಭ ಹಾರೈಸಿದರು.
ಆಂಧ್ರ ಪ್ರದೇಶ ಯಲ್ಲೂರು ಸಂಸದ ಮಹೇಶ್ ಕುಮಾರ್ ಯಾದವ್, ಹುಮಾನಬಾದ್‍ನ ಕಾಂಗ್ರೆಸ್ ಮುಖಂಡ ಅಭಿಷೇಕ್, ಅರಸೀಕೆರೆ ಕೊಟ್ರೇಶ್, ಶಿರ್ಶಿ ವೀರಶೈವ ಸಮಾಜದ ಮುಖಂಡರು ಶುಭಕೋರಿದರು.
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಸಂತೋಷ್, ಮಂಜುನಾಥ, ಡಿವೈಎಸ್ಪಿಗಳಾದ ಮಲ್ಲೇಶ್ ದೊಡ್ಡಮನಿ, ಬಸವರಾಜ್, ಇನ್ಸ್ ಪೆಕ್ಟರ್‍ಗಳಾದ ಕಿರಣ್‍ಕುಮಾರ್, ಇಮ್ರಾನ್ ಬೇಗ್, ಮಲ್ಲಮ್ಮ ಚೌಬೆ, ಬಾಲಚಂದ್ರ ನಾಯ್ಕ, ಸುನೀಲ್ ಅವರುಗಳು ತಮ್ಮ ಸಿಬ್ಬಂದಿಗಳೊಡನೆ ಆಗಮಿಸಿ ಶುಭಕೋರಿದರು.
ಅಪರ ಜಿಲ್ಲಾಧಿಕಾರಿ ಲೊಕೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್, ಉಪ ವಿಭಾಗಾಧಿಕಾರಿ ದುರ್ಗಾಶ್ರೀ, ತಹಶೀಲ್ದಾರ್ ಡಾ|| ಎಂ.ಬಿ. ಅಶ್ವಥ್, ಡಿಡಿಪಿಐ ಕೊಟ್ರೇಶ್, ಲೊಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ನರೇಂದ್ರಬಾಬು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಶುಭ ಹಾರೈಸಿದರು.
ಬಾಪೂಜಿ ವಿದ್ಯಾಸಂಸ್ಥೆಯ ಅಧ್ಯಕ್ಷ ರಮಾನಂದ್, ಖಜಾಂಚಿ ನಿರಂಜನ್ ಹಾಗೂ ಆಡಳಿತ ಮಂಡಳಿ ಸದಸ್ಯರುಗಳು, ವಿದ್ಯಾಸಂಸ್ಥೆಯ ವಿವಿಧ ಶಾಲಾ-ಕಾಲೇಜು ಮುಖ್ಯಸ್ಥರು ತಮ್ಮ ಸಿಬ್ಬಂದಿಗಳೊಂದಿಗೆ ಆಗಮಿಸಿ ಶುಭಕೋರಿದರು.
ದಾವಣಗೆರೆ ಲೋಕಸಭಾ ಸದಸ್ಯರು ಮತ್ತು ಡಾ|| ಶಾಮನೂರು ಶಿವಶಂಕರಪ್ಪನವರ ಸೊಸೆ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರು ಆಗಮಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!