ಬೆಂಗಳೂರು: ಸಾಹಿತಿ ಶ್ರೀನಿವಾಸ ವೈದ್ಯ ಅವರು ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.
ಧಾರವಾಡ ಜಿಲ್ಲೆಯ ನವಲಗುಂದದವರಾದ ಅವರು,ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ಸಾಹಿತ್ಯ ಕೃಷಿ ಮಾಡಿದ್ದರು.
ವೈದ್ಯ ಅವರ ಮನಸುಖರಾಯನ ಮನಸು ಕೃತಿಗೆ ಪರಮಾನಂದ ಪ್ರಶಸ್ತಿ (2003), ‘ಹಳ್ಳ ಬಂತು ಹಳ್ಳ’ ಕಾದಂಬರಿಗೆ ರಾಜ್ಯ ಸಾಹಿತ್ಯ ಅಕಾಡಮಿ ಬಹುಮಾನ (2004) ಮತ್ತು ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ (2008) ಲಭಿಸಿತ್ತು. ರಾಜ್ಯೋತ್ಸವ ಪ್ರಶಸ್ತಿ (2010) ಪುರಸ್ಕೃತರಾಗಿರುವ ಅವರು ‘ಸಂವಾದ ಟ್ರಸ್ಟ್’ ಅನ್ನು 1997ರಲ್ಲಿ ಸ್ಥಾಪಿಸಿದ್ದು, ನಾಡಿನ ಖ್ಯಾತ ಬರಹಗಾರರಿಂದ ಭಾಷಣ, ವಾಚನ, ಸಂವಾದ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಕ್ರಿಯಾಶೀಲರಾಗಿದ್ದರು.
