ಉಚ್ಚoಗಿದುರ್ಗ ಗ್ರಾ.ಪಂ ಅಧ್ಯಕ್ಷರಾಗಿ ಸಾಕಮ್ಮ ಸಿದ್ದಪ್ಪ ಅವಿರೋಧ ಆಯ್ಕೆ

ಉಚ್ಚಂಗಿದುರ್ಗ: ಇಲ್ಲಿನ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಸಾಕಮ್ಮ ಸಿದ್ದಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ತಹಶೀಲ್ದಾರ್ ಎಲ್.ಎಂ ನಂದೀಶ್ ತಿಳಿಸಿದರು.
ಮಾಜಿ ಅಧ್ಯಕ್ಷರಾಗಿದ್ದ ಮಮತಾ ಸಿದ್ದನಗೌಡ ಸ್ವಯಂ ಪ್ರೇರಿತವಾಗಿ ಅಧ್ಯಕ್ಷ ಸ್ಥಾನಕ್ಕೆ ಈಚೆಗೆ ರಾಜೀನಾಮೆ ನೀಡಿದ್ದರು. ಅವರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಾಕಮ್ಮ ಸಿದ್ದಪ್ಪ ಒಬ್ಬರೇ ನಾಮ ಪತ್ರ ಸಲ್ಲಿಸಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ಗ್ರಾಮ ಪಂಚಾಯಿತಿ ಸರ್ವ ಸದಸ್ಯರೂ ನೂತನ ಅಧ್ಯಕ್ಷರಿಗೆ ಅಭಿನಂದನೆ ತಿಳಿಸಿದರು..