ದಾವಣಗೆರೆ

Samarth: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಉದ್ಯಾನವನ ಹೆಚ್ಚಿಸಲು ಸಮರ್ಥ್ ಶ್ಯಾಮನೂರು ಮಲ್ಲಿಕಾರ್ಜುನ್ ಸೂಚನೆ

Share
Share

ದಾವಣಗೆರೆ: (Samarth) ದಾವಣಗೆರೆ ದಕ್ಷಿಣ ಕ್ಚೇತ್ರದಲ್ಲಿ ಹೆಚ್ಚು ಉದ್ಯಾನವನಗಳನ್ನು ನಿರ್ಮಿಸುವ ಜೊತೆಗೆ ಜನಪ್ರತಿನಿಧಿಗಳಿಗೆ ಮನವರಿಕೆ ಆಗುವಂತೆ ಕಾಮಗಾರಿಗಳ ವಿವರಣೆ ನೀಡಬೇಕೆಂದು ಅಧಿಕಾರಿಗಳಿಗೆ ಶಾಸಕರಾದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಸೂಚನೆ ನೀಡಿದರು.

ಮಹಾನಗರಪಾಲಿಕೆ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಗತಿಯಲ್ಲಿರುವ ಎಲ್ಲಾ ಕಾಮಗಾರಿಗಳ ವಿವರಗಳನ್ನು ಸಾರ್ವಜನಿಕರಿಗೆ ಅರ್ಥವಾಗುವ ರೀತಿಯಲ್ಲಿ ನೀಡಬೇಕು ಎಂದರು.

ಜಲಸಿರಿಯಡಿ ನಲ್ಲಿ ಸಂಪರ್ಕ ಅಳವಡಿಸಿದ ಕೆಲವು ಮನೆಗಳಿಗೆ ದುಬಾರಿ ಮೊತ್ತದ ನೀರಿನ ಬಿಲ್ ಬರುತ್ತಿರುವುದರಿಂದ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ. ಶಿವನಗರದಲ್ಲಿ ಜಲಸಿರಿ ಸಂಪರ್ಕವು ಇನ್ನೂ ಆಗಿಲ್ಲ. ಜಲಸಿರಿ ಯೋಜನೆಯಲ್ಲಿನ ಸಮಸ್ಯೆಗಳು ಮತ್ತು ವಿಳಂಬದ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿ ವಿಳಂಬ, ಅನಿಯಮಿತ ನೀರು ಸರಬರಾಜು ಮತ್ತು ದುಬಾರಿ ಬಿಲ್ ಅಂತಹ ದೂರುಗಳ ಬಗ್ಗೆ ಜನಪ್ರತಿನಿಧಿಗಳಿಗೆ ಪಾಲಿಕೆ ಅಧಿಕಾರಿಗಳು ಕೂಡಲೇ ಉತ್ತರ ನೀಡುವಂತೆ ತಿಳಿಸಿದರು.

ಕುಡಿಯುವ ನೀರು, ಸ್ವಚ್ಛತೆ ಮತ್ತು ರಸ್ತೆಗಳಂತಹ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ಆದ್ಯತೆ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ದಾವಣಗೆರೆ ನಗರದಲ್ಲಿ ಪ್ರಗತಿಯಲ್ಲಿರುವ ವಿವಿಧ ಸ್ಮಾರ್ಟ್ ಸಿಟಿ ಹಾಗೂ ಪಾಲಿಕೆಯ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಮತ್ತು ಗುಣಮಟ್ಟದಿಂದ ಪೂರ್ಣಗೊಳಿಸಬೇಕೆಂದರು.

*ಬೆಸ್ಕಾಂ* : ಬೆಸ್ಕಾಂ ಸಹಾಯವಾಣಿಗೆ ಬರುವ ಕರೆಗಳ ಮೂಲಕ ಸಮಸ್ಯೆಗಳನ್ನು ಹೇಗೆ ಪರಿಹರಿಸುತ್ತೀರಿ ಎಂಬುದನ್ನು ವಿವರವಾಗಿ ತಿಳಿಸಿ ಎಂದ ಅವರು ಮತ್ತು ಮುಂದಿನ ದಿನಗಳಲ್ಲಿ ಬರುವ ಗಣೇಶ ಚತುರ್ಥಿ ಹಬ್ಬಕ್ಕೆ ರಸ್ತೆಯಲ್ಲಿರುವ ವಿದ್ಯುತ್ ಕಂಬ, ತಂತಿಗಳನ್ನು ಕೂಡಲೇ ಸರಿಪಡಿಸಿಬೇಕೆಂದರು.

ದಾವಣಗೆರೆ ನಗರದಲ್ಲಿ ಏಕಕಾಲಕ್ಕೆ ವಿದ್ಯುತ್ ಕಡಿತಗೊಳಿಸಬಾರದು, ಹಂತ ಹಂತವಾಗಿ ವಿದ್ಯುತ್ ಕಡಿತಗೊಳಿಸಿ ಇದಕ್ಕಾಗಿ ಇನ್ನೂ ಕೆಲವು ಪ್ರತ್ಯೇಕ ಟವರ್ ಅಳವಡಿಸಿಕೊಳ್ಳಿ ಜೊತೆಗೆ ವಿದ್ಯುತ್ ತಂತಿಗಳನ್ನು ಸರಿಪಡಿಸಿಕೊಳ್ಳುವಾಗ ಮರಗಳನ್ನು ಕಡಿದು ಅದನ್ನೇ ಅಲ್ಲಿಯೇ ಬಿಟ್ಟು ಹೋಗುತ್ತಿರಿ ಅದನ್ನು ಸ್ವಚ್ಚಗೊಳಿಸಬೇಕು ಎಂದರು.

ಅಡುಗೆ ಮನೆಯಲ್ಲಿ ಒಣ ಮತ್ತು ಹಸಿ ತ್ಯಾಜ್ಯಗಳಿಗೆ ಪ್ರತ್ಯೇಕವಾಗಿಡಬೇಕು. ಮನೆಯ ಉಳಿದ ಗೃಹ ತ್ಯಾಜ್ಯಗಳನ್ನು ಸಂಗ್ರಹಿಸಿಡಲು, ಅಂದರೆ ಕಾಗದ, ಪ್ಲಾಸ್ಟಿಕ್ ಇತ್ಯಾದಿಗಳಿಗೆ ಎರಡು ಚೀಲಗಳನ್ನು ಇರಿಸಿಕೊಳ್ಳಬೇಕು. ಅಡುಗೆ ಮನೆಯಲ್ಲಿ ಉತ್ಪತ್ತಿಯಾಗುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಸ್ವಚ್ಛವಾಗಿರಿಸಿ, ಒಣಗಿಸಿ, ನಂತರ ಒಣ ತ್ಯಾಜ್ಯ ಬಿನ್ ಗೆ ಹಾಕಿ. ಗಾಜು, ಪ್ಲಾಸ್ಟಿಕ್ ಪಾತ್ರೆಗಳಿಂದ ಆಹಾರ ಪದಾರ್ಥವನ್ನು ತೊಳೆದಿಡಿ. ಹಸಿ ತ್ಯಾಜ್ಯವನ್ನು ಪ್ರತಿನಿತ್ಯ ಮನೆಯಿಂದ ಹೊರಕ್ಕೆ ಕಳುಹಿಸಿ. ಒಣ ತ್ಯಾಜ್ಯವನ್ನು ಮನೆಯಲ್ಲಿ ಶೇಖರಿಸಿಕೊಂಡು ವಾರಕ್ಕೊಮ್ಮೆ ವಿಲೇವಾರಿ ಮಾಡಿ. ಸ್ಯಾನಿಟರಿ ತ್ಯಾಜ್ಯವನ್ನು ವಿಲೇವಾರಿ ಮಾಡಲು ಕಾಗದದ ಚೀಲಗಳನ್ನು ಬಳಸಲು ಜಾಗೃತಿ ಮೂಡಿಸಲು ತಿಳಿಸಿ ಪ್ರತ್ಯೇಕವಾಗಿ ಸಂಗ್ರಹಿಸಲು ಅಧಿಕಾರಿಗಳಿಗೆ ತಿಳಿಸಿದರು.

ಎಲ್ಡೆಕ್ಟ್ರಾನಿಕ್ಸ್, ಬ್ಯಾಟರಿ, ಬಲ್ಪ್ ಇವುಗಳನ್ನು ಸ್ಪೇಶಲ್ ಕೇರ್ ವೆಸ್ಟ್(ವಿಶೇಷ ಕಾಳಜಿ ತ್ಯಾಜ್ಯ)ಗಳನ್ನಾಗಿ ಬೇರ್ಪಡಿಸಬೇಕೆಂದರು.

ಪೌರಕಾರ್ಮಿಕ ಕೊರತೆ ಇರುವುದರಿಂದ ಕಸವಿಲೇವಾರಿ ಮಾಡಲು ಅನಾನೂಕೂಲವಾಗುತ್ತಿದೆ ಎಂದು ಪಾಲಿಕೆ ಅಧಿಕಾರಿಗಳು ಶಾಸಕರ ಗಮನಕ್ಕೆ ತಂದರು.

ನೂರಾನಿ ಶಾದಿಮಹಲ್ ಬಳಿ, ಇಮಾಮ್ ನಗರ, ಜಗಜೀವನ ರಾಂ ನಗರ, ಯರಗುಂಟೆ, ಇನ್ನೂ ಹಕ್ಕುಪತ್ರ ವಿತರಣೆಯಾಗಿರುವುದಿಲ್ಲ, ಈ ಬಗ್ಗೆ ಮಾಹಿತಿ ನೀಡಲು ತಿಳಿಸಿ ರಸ್ತೆಯ ಬದಿಗಳಲ್ಲಿ ಅನವಶ್ಯಕವಾಗಿ ಬೆಳೆದ ಮರಗಳನ್ನು ಕಡಿದು ಪುನಃ ಗಿಡಗಳನ್ನು ನೆಡುವಂತೆ ಅರಣ್ಯ ಇಲಾಖೆಯವರಿಗೆ ಸೂಚಿಸಿದರು.

ಈ ಸಭೆಯಲ್ಲಿ ಪಾಲಿಕೆ ಆಯುಕ್ತರಾದ ಮಹಾಂತೇಶ, ಜಲಸಿರಿ ಯೋಜನಾ ನಿರ್ದೇಶಕರಾದ ವಿರೇಂದ್ರ ಕುಂದಗೋಳ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ದಾವಣಗೆರೆರಾಜಕೀಯರಾಜ್ಯ / ಕರ್ನಾಟಕ

BSY: ಚಿತ್ರದುರ್ಗದಲ್ಲಿ ನಾಳೆ ‘ಬಿಎಸ್ ವೈ ಅಭಿಮಾನೋತ್ಸವ’ದ ಅಬ್ಬರ: ಅಮಿತ್ ಶಾ ಭಾಗಿ, ದಾವಣಗೆರೆಯಿಂದ ಹೊರಟ ಯಡಿಯೂರಪ್ಪ ಕುಟುಂಬ!

ದಾವಣಗೆರೆ/ಚಿತ್ರದುರ್ಗ: (BSY) ಕರ್ನಾಟಕ ರಾಜಕಾರಣದ ಧ್ರುವತಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸುವರ್ಣ ಸಂಭ್ರಮದ "ಅಭಿಮಾನೋತ್ಸವ"ಕ್ಕೆ ಕೋಟೆ ನಾಡು ಚಿತ್ರದುರ್ಗ ಸಜ್ಜಾಗಿದೆ. ಮೇ 9ರ...

ಅಪರಾಧದಾವಣಗೆರೆ

Lokayukta: ದಾವಣಗೆರೆ ಪಾಲಿಕೆ ವಲಯ-1ರ ಮೇಲೆ ಲೋಕಾಯುಕ್ತ ದಾಳಿ: ಫೋನ್-ಪೇ ಮೂಲಕ ಲಂಚದ ಆರೋಪ, ದಾಖಲೆಗಳ ಪರಿಶೀಲನೆ

ದಾವಣಗೆರೆ: (Lokayukta) ಮಹಾನಗರ ಪಾಲಿಕೆ ವಲಯ-1ರ ಕಚೇರಿಯಲ್ಲಿ ನಡೆಯುತ್ತಿದ್ದ ಎನ್ನಲಾದ ಸಾಲು ಸಾಲು ಅಕ್ರಮಗಳ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ, ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ...

Related Articles
ದಾವಣಗೆರೆರಾಜ್ಯ / ಕರ್ನಾಟಕ

Lokayukta SP: ದಾವಣಗೆರೆ ನೂತನ ಲೋಕಾಯುಕ್ತ ಎಸ್‌ಪಿಯಾಗಿ ಆ್ಯಂಟನಿ ಜಾನ್ ಅಧಿಕಾರ ಸ್ವೀಕಾರ: ದೂರು ಸಲ್ಲಿಕೆಗೆ ಕರೆ

ದಾವಣಗೆರೆ: (Lokayukta SP) ದಾವಣಗೆರೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ (ಎಸ್‌ಪಿ) ಆ್ಯಂಟನಿ ಜಾನ್ ಜೆ.ಕೆ...

ದಾವಣಗೆರೆಅಪರಾಧರಾಜ್ಯ / ಕರ್ನಾಟಕ

Sand: ಹರಿಹರ ತುಂಗಭದ್ರಾ ನದಿ ಪಾತ್ರದಲ್ಲಿ ಭಾರಿ ಅಕ್ರಮ ಮರಳು ದಂಧೆ ಶಂಕೆ! ನಿಷೇಧಿತ ಯಂತ್ರಗಳು, ತೆಪ್ಪ ಬಳಸಿ ಮರಳು ಲೂಟಿ!

ಹರಿಹರ (Sand):ದಾವಣಗೆರೆ ಜಿಲ್ಲೆಯ ಹರಿಹರ ನಗರ ವ್ಯಾಪ್ತಿಯ ತುಂಗಭದ್ರಾ ನದಿಯಲ್ಲಿ ಕಾನೂನು ಬಾಹಿರವಾಗಿ ಮರಳು ಗಣಿಗಾರಿಕೆ...

ದಾವಣಗೆರೆ

DJ: ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ ಸಿಸ್ಟಂ ಬಳಕೆಗೆ ಕಟ್ಟುನಿಟ್ಟಿನ ನಿಯಮ: ಜಿಲ್ಲಾಧಿಕಾರಿ ಆದೇಶ

ದಾವಣಗೆರೆ: (DJ) ದಾವಣಗೆರೆ ಜಿಲ್ಲೆಯಾದ್ಯಂತ ದಿನಾಂಕ 14-09-2026 ರಿಂದ ಆರಂಭವಾಗುವ ಗಣೇಶ ಹಬ್ಬದ ಆಚರಣೆ ಹಾಗೂ...