ಸ್ಯಾಂಟ್ರೋ ರವಿ ಸಿಐಡಿ ಪೊಲೀಸ್ ಕಸ್ಟಡಿಗೆ
ಬೆಂಗಳೂರು: ಸ್ಯಾಂಟ್ರೊ ರವಿ ವಿರುದ್ಧದ ದೂರುಗಳ ಬಗ್ಗೆ ತನಿಖೆ ನಡೆಸಲು ಸಿಐಡಿ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಪರಿಶಿಷ್ಟ ಮಹಿಳೆ ಮೇಲಿನ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಗೂಂಡಾಗಿರಿ ಆರೋಪದ ಮೇರೆಗೆ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ಪೊಲೀಸರು ಗುಜರಾತ್‌ನಲ್ಲಿ ಬಂಧಿಸಿದ್ದರು.
ಸ್ಯಾಂಟ್ರೊ ರವಿ ವಿರುದ್ಧದ ಎಲ್ಲ ದಾಖಲೆಗಳನ್ನು ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಗೃಹ ಸಚಿವರು ಮಾಹಿತಿ ನೀಡಿದರು. ಬಂಧಿತ ಸ್ಯಾಂಟ್ರೊ ರವಿ ಮತ್ತು ಸಹವರ್ತಿಗಳಿಗೆ ಮೈಸೂರು ಜಿಲ್ಲಾ ಸೆಷನ್ಸ್ ನ್ಯಾಯಾಲಯ ಈಗಾಗಲೇ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.