ಬೆಂಗಳೂರಿಗೆ ಸ್ಯಾಂಟ್ರೋ ರವಿ
ಉಡುಪಿ: ಗುಜರಾತ್‌ನಲ್ಲಿ ಬಂಧಿತನಾಗಿರುವ ಸ್ಯಾಂಟ್ರೋ ರವಿಯನ್ನು ಬೆಂಗಳೂರಿಗೆ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಗುಜರಾತ್ ನ್ಯಾಯಾಲಯದಲ್ಲಿ ಹಾಜರುಪಡಿಸಿ ಶುಕ್ರವಾರ ಅಥವಾ ಶನಿವಾರ ಬೆಂಗಳೂರಿಗೆ ಕರೆತರಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಮೈಸೂರು ಹಾಗೂ ರಾಮನಗರ ಜಿಲ್ಲೆಯ ಪೊಲೀಸರು 11 ದಿನಗಳಿಂದ ಸ್ಯಾಂಟ್ರೋ ರವಿ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದರು. ಕೊನೆಗೂ ಆತ ಸಿಕ್ಕಿಬಿದ್ದಿದ್ದಾನೆ ಎಂದು ಹೇಳಿದರು.
ಪ್ರಕರಣದಲ್ಲಿ ಅತ್ಯಂತ ಪಾರದರ್ಶಕವಾಗಿ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯಲಿದೆ. ಅಧಿಕಾರಿಗಳು ಅಥವಾ ರಾಜಕಾರಣಿಗಳು ಭಾಗಿಯಾಗಿದ್ದರೆ ತನಿಖೆಯಲ್ಲಿ ಬಯಲಾಗಲಿದೆ. ಸ್ಯಾಂಟ್ರೋ ರವಿಯ ಸಹಚರರನ್ನೂ ಬಂಧಿಸಲಾಗುವುದು. ಆತನ ಎಲ್ಲ ಕೃತ್ಯಗಳಿಗೆ ತಕ್ಕ ಶಿಕ್ಷೆಯಾಗಲಿದೆ ಎಂದರು.