ಸರ್ಕಾರಿ ನೌಕರರ ಮಹಾ ಸಮ್ಮೇಳನಕ್ಕಾಗಿ ಹೈಸ್ಕೂಲ್ ಮೈದಾನದಿಂದ ಹೊರಡಲಿವೆ 40 ಬಸ್‌ಗಳು
ದಾವಣಗೆರೆ: ಇದೇ ಫೆ.27ರಂದು ಬೆಂಗಳೂರಿನ ಅರಮನೆ ಮೈದಾನದಲಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಹಾಗೂ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುವ ಜಿಲ್ಲೆಯ ವಿವಿಧ ತಾಲ್ಲೂಕುಗಳ ಸರ್ಕಾರಿ ನೌಕರರಿಗಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ದಾವಣಗೆರೆ ಹೈಸ್ಕೂಲ್ ಮೈದಾನದಿಂದ ದಿ.26ರಂದು ರಾತ್ರಿ 12 ಗಂಟೆಯಿಂದ ಬಸ್‌ಗಳು ಹೊರಡಲಿದ್ದು, ಪ್ರತಿ ತಾಲ್ಲೂಕಿಗೆ 5 ಬಸ್‌ಗಳು ಹಾಗೂ ಜಿಲ್ಲಾ ಕೇಂದ್ರಕ್ಕೆ 15 ಬಸ್‌ನಂತೆ ಒಟ್ಟು 40 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ವೀರೇಶ್ ಎಸ್.ಒಡೇನಪುರ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅಂದಿನ ಸಮ್ಮೇಳವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ಸಚಿವರು, ಉನ್ನತ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಹಳೇ ಪಿಂಚಣಿ ಯೋಜನೆ ಮರುಜಾರಿ, 7ನೇ ವೇತನ ಆಯೋಗದ ವರದಿ ಅನುಷ್ಠಾನ ಹಾಗೂ ಆರೋಗ್ಯ ಸಂಜೀವಿನ ಯೋಜನೆ ಲೋಕಾರ್ಪಣೆ ಸೇರಿ ಮೂರು ಬೇಡಿಕೆಗಳ ಈಡೇರಿಸಲು ಈ ಸಮ್ಮೇಳನದಲ್ಲಿ ಸರ್ಕಾರಕ್ಕೆ ಒತ್ತಡ ಹೇರಲಾಗುವುದು ಎಂದು ಒಡೇನಪುರ ಹೇಳಿದ್ದಾರೆ.
ಜಿಲ್ಲೆಯಿಂದ 3 ಸಾವಿರಕ್ಕೂ ಹೆಚ್ಚು ನೌಕರರು ತೆರಳಲಿದ್ದು, 45 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಮಾಹಿತಿಗಾಗಿ ಮೊ.9742472626, 9844645183ಕ್ಕೆ ಸಂಪರ್ಕಿಸಬಹುದು ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯಾಧ್ಯಕ್ಷ ಬಿ. ಪಾಲಾಕ್ಷಿ, ಕಾರ್ಯದರ್ಶಿ ಗುರುಮೂರ್ತಿ ಸಿ., ಖಜಾಂಚಿ ತಿಪ್ಪೇಸ್ವಾಮಿ, ಮಂಜಮ್ಮ, ರಂಗಸ್ವಾಮಿ ಉಪಸ್ಥಿತರಿದ್ದರು.